ಕ್ರೀಡೆ/ಸಿನಿಮಾಕ್ರೈಂವೈರಲ್ ನ್ಯೂಸ್

ರಶ್ಮಿಕಾ ಮಂದಣ್ಣ ವಿಡಿಯೋ ಡೀಪ್‌ಫೇಕ್ ಮಾಡಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿದ್ರಾ..? ಈ ಬಗ್ಗೆ ದೆಹಲಿ ಪೊಲೀಸರು ಹೇಳಿದ್ದೇನು?

215

ನ್ಯೂಸ್ ನಾಟೌಟ್ : ಎಐ ಮೂಲಕ ಡೀಪ್‌ಫೇಕ್ ತಂತ್ರಜ್ಞಾನ ಬಳಸಿ ವಿಡಿಯೋಗೆ ನಟಿ ರಶ್ಮಿಕಾ ಮಂದಣ್ಣ ಮುಖ ಕೂರಿಸಿ ಅಸಭ್ಯವಾಗಿ ತೋರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿದ್ದ ದೆಹಲಿ ಪೊಲೀಸರು ಸಧ್ಯ ನಾಲ್ವರು ಶಂಕಿತರನ್ನು ಪತ್ತೆ ಹಚ್ಚಿದ್ದಾರೆ.

ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದ ರಶ್ಮಿಕಾ ಎಐ ವಿಡಿಯೋ ಬಹುದೊಡ್ಡ ಸಂಚಲನ ಸೃಷ್ಟಿಸಿತ್ತು.

ದೆಹಲಿ ಪೊಲೀಸರು ಈ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಪತ್ತೆಹಚ್ಚಿದ್ದು, ಆದರೆ ಅವರು ಅಪ್‌ಲೋಡ್ ಮಾಡಿದವರು ಮತ್ತು ವೀಡಿಯೊದ ರಚನೆಕಾರರಲ್ಲ ಎಂದು ತಿಳಿದುಬಂದಿದೆ. ಪ್ರಮುಖ ಆರೋಪಿಗಾಗಿ ಮತ್ತಷ್ಟು ಶೋಧ ಕಾರ್ಯ ನಡೆಯುತ್ತಿದೆ ಎಂದು ದೆಹಲಿ ಪೊಲೀಸರು
ನಟಿ ರಶ್ಮಿಕಾ ಮಂದಣ್ಣ ಡೀಪ್‌ಫೇಕ್‌ ವಿಡಿಯೋ ಪ್ರೊಫೈಲ್‌ ಪ್ರಕರಣದಲ್ಲಿ ಭಾಗಿಯಾಗಿರುವ ನಾಲ್ವರು ಶಂಕಿತರನ್ನು ಪತ್ತೆಹಚ್ಚಲಾಗಿದ್ದು, ಇನ್ನು ಇತ್ತೀಚಿಗಷ್ಟೇ ರಶ್ಮಿಕಾ ಮಂದಣ್ಣ ಹೈದರಾಬಾದ್‌ನಲ್ಲಿ ನಡೆದ ಅನಿಮಲ್‌ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡುವಾಗ, ಡೀಪ್‌ಫೇಕ್‌ “ಭಯಾನಕ” ಎಂದು ಹೇಳಿದ್ದರು.

ಅಲ್ಲದೆ, ವಿಡಿಯೋ ಕ್ಲಿಪ್ ವೈರಲ್ ಆದ ನಂತರ ತನಗೆ ಬೆಂಬಲ ನೀಡಿದ ಅಭಿಮಾನಿಗಳಿಗೆ, ಹಿರಿಯ ನಟರಿಗೆ ಕೃತಜ್ಞತೆ ಸಲ್ಲಿಸಿದ್ದರು ಎನ್ನಲಾಗಿದೆ.

See also  ಸಿಎಂ ವಿರುದ್ಧದ ಮುಡಾ ಹಗರಣಕ್ಕೆ ಟ್ವಿಸ್ಟ್‌..! ದೂರು ಹಿಂಪಡೆಯಲು ದೂರುದಾರ ಸ್ನೇಹಮಯಿ ಕೃಷ್ಣಗೆ ಹಣದ ಆಮಿಷ ಆರೋಪ..?
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget