ಕ್ರೈಂವೈರಲ್ ನ್ಯೂಸ್

ಜೀವಂತ ಇದ್ದ ತಾಯಿ-ಮಗನನ್ನು ಸತ್ತಿದ್ದಾಗಿ ರೇಷನ್‌ ಕಾರ್ಡ್‌ನಿಂದ ಹೆಸರು ಡಿಲೀಟ್‌..! ಅಧಿಕಾರಿಗಳ ಎಡವಟ್ಟಿಗೆ ಬಡ ಕುಟುಂಬ ಬಲಿ..!

250

ನ್ಯೂಸ್ ನಾಟೌಟ್: ಜೀವಂತವಾಗಿರುವ ತಾಯಿ-ಮಗನನ್ನು ಸತ್ತಿದ್ದಾಗಿ ಘೋಷಿಸಿ, ಇಬ್ಬರನ್ನೂ ಪಡಿತರ ಚೀಟಿ (BPL Card) ಹೆಸರಿನಿಂದ ಆಹಾರ ಇಲಾಖೆಯು (Food Department) ಡಿಲೀಟ್ ಮಾಡಿದ ಘಟನೆ ವಿಜಯನಗರ ಜಿಲ್ಲೆಯ ಆಹಾರ ಇಲಾಖೆಯಲ್ಲಿ ಬೆಳಕಿಗೆ ಬಂದಿದೆ.

ಅಂಜೀನಮ್ಮ ಮತ್ತು ಅವರ ಪುತ್ರ ಅಜಯ್ ಎಂಬವರು ಬದುಕಿದ್ದಾರೆ, ಹೀಗಿರುವಾಗಲೇ 2019ರಲ್ಲೇ ಸತ್ತಿದ್ದಾರೆ ಎಂದು ಬಿಪಿಎಲ್‌ ಕಾರ್ಡ್‌ನಿಂದ ಹೆಸರು ಡಿಲೀಟ್‌ ಮಾಡಲಾಗಿದೆ ಎಂದು ವರದಿ ತಿಳಿಸಿದೆ. ಕಳೆದ ಐದು ವರ್ಷದಿಂದ ಪಡಿತರದಿಂದ ಬಡ ಕುಟುಂಬವೊಂದು ವಂಚಿತವಾಗಿದೆ ಎಂಬ ಆರೋಪ ಕೇಳಿಬಂದಿದೆ. ಆಹಾರ ಇಲಾಖೆಯ ಎಡವಟ್ಟಿನಿಂದ ತಾಯಿ ಮಗ ಸರ್ಕಾರಿ ಸೌಲಭ್ಯಗಳಿಂದಲೂ ವಂಚಿತರಾಗಿದ್ದಾರೆ ಎನ್ನಲಾಗಿದೆ. ಇತ್ತ ನ್ಯಾಯಕ್ಕಾಗಿ ಅಂಜಿನಮ್ಮ ಕುಟುಂಬ ನಿತ್ಯ ಆಹಾರ ಇಲಾಖೆ, ನ್ಯಾಯಬೆಲೆ ಅಂಗಡಿಗೆ ಅಲೆಯುತ್ತಿದ್ದಾರೆ ಎನ್ನಲಾಗಿದೆ. ಅಧಿಕಾರಿಗಳು ಪರಿಶೀಲಿಸದೇ ಅಂಜೀನಮ್ಮ ಹೆಸರು ತೆಗೆದಿರುವುದಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿದೆ.

Click 👇

https://newsnotout.com/2024/05/bengaluru-and-jolly-bike-ride-and-viral-video
https://newsnotout.com/2024/05/narendra-modi-and-teacher-rajak
https://newsnotout.com/2024/05/30-year-old-jyoti-amge-viral-video
See also  ಮೇಲುಕೋಟೆ ವಿವಾಹಿತ ಶಿಕ್ಷಕಿಯ ಉಸಿರು ನಿಲ್ಲಿಸಿದ ಪ್ರಕರಣ – ಆರೋಪಿ ಅರೆಸ್ಟ್!!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget