Latestಕ್ರೀಡೆಕ್ರೀಡೆ/ಸಿನಿಮಾಕ್ರೈಂಬೆಂಗಳೂರು

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಭಾರಿ ನೂಕುನುಗ್ಗಲಿಗೆ ನಾಲ್ವರ ಸಾವು..! ಹಲವರು ಅಸ್ವಸ್ಥ, ಕೆಲವರ ಸ್ಥಿತಿ ಗಂಭೀರ..!

796

ನ್ಯೂಸ್‌ ನಾಟೌಟ್‌: ಸತತ 18 ವರ್ಷಗಳ ನಂತರ ಚೊಚ್ಚಲ IPL ಟ್ರೋಫಿ ಮುಡಿಗೇರಿಸಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆಗೆ ಬಂದಿದ್ದ ವ್ಯಕ್ತಿಗಳು ನಾಲ್ವರು

 ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.

ಟ್ರೋಫಿ ಗೆದ್ದ ತಂಡವನ್ನು ಕಣ್ತುಂಬಿಕೊಳ್ಳಲು ನಗರದ ವಿವಿಧೆಡೆಯಿಂದ ಅಪಾರ ಸಂಖ್ಯೆಯಲ್ಲಿ ಯುವಕ, ಯುವತಿಯರು ಆಗಮಿಸುತ್ತಿದ್ದು, ಕ್ರೀಡಾಂಗಣದ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದು, ನೂಕುನುಗ್ಗಲಿನಿಂದ ಓರ್ವ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ. ಇವರಲ್ಲಿ ಮೂವರ ಪರಿಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
18, 19, ಮತ್ತು 20ನೇ ಗೇಟ್ ಓಪನ್ ಆಗುತ್ತಿದ್ದಂತೆ ಅಭಿಮಾನಿಗಳು ಏಕಾಏಕಿ ಒಳನುಗ್ಗಿದ್ದು, ತಳ್ಳಾಟ, ನೂಕುನುಗ್ಗಲು ಉಂಟಾಗಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.

ಆರ್ ಸಿಬಿ ಆಟಗಾರರು ಆಗಮಿಸುವ ಗೇಟ್ ನಂಬರ್ 12 ರ ಬಳಿ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ನೆರೆದಿದ್ದ ವೇಳೆ ಭಾರಿ ನೂಕು ನುಗ್ಗಲು ಉಂಟಾಗಿದೆ. ಈ ವೇಳೆ ಮಹಿಳಾ ಅಭಿಮಾನಿಯೊಬ್ಬರು ಅಸ್ವಸ್ಥಗೊಂಡಿದ್ದು, ಅವರನ್ನು ಕಾರಿನಲ್ಲಿ ಆಸ್ಪತ್ರೆಗೆ ರವಾನಿಸಲಾಗಿದೆ.

ಮತ್ತೊಂದೆಡೆ ಗೇಟ್ ನಂಬರ್ 6 ರ ಬಳಿ ಯುವಕನೋರ್ವ ಗೇಟ್ ಹತ್ತಲು ಹೋಗಿ ಕಾಲು ಮುರಿದುಕೊಂಡಿರುವುದಾಗಿ ವರದಿಯಾಗಿದೆ. ಭಾರಿ ಜನ ಹಾಗೂ ವಾಹನ ದಟ್ಟಣೆಯಿಂದಾಗಿ ಕ್ರೀಡಾಂಗಣದ ಸುತ್ತಮುತ್ತಲಿನ ರಸ್ತೆಗಳಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ.

See also  ಮಟ್ಕಾ ಜೂಜಾಟ ನಡೆಸುತ್ತಿದ್ದ ಅಡ್ಡೆಗೆ ಪೊಲೀಸರ ದಾಳಿ, ಐವರ ವಿರುದ್ಧ ಪ್ರಕರಣ ದಾಖಲು
  Ad Widget   Ad Widget   Ad Widget   Ad Widget   Ad Widget   Ad Widget   Ad Widget