ನ್ಯೂಸ್ ನಾಟೌಟ್: 18 ವರ್ಷಗಳ ನಂತರ ಚೊಚ್ಚಲ ಐಪಿಎಲ್ ಟ್ರೋಫಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಡಿಗೇರಿಸಿಕೊಂಡಿದೆ. ಈ ಹಿನ್ನಲೆಯಲ್ಲಿ ತಂಡದ ಸಂಭ್ರಮಾಚರಣೆ ವೇಳೆ ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಪಟ್ಟಿದ್ದಾರೆ. ಇವರಲ್ಲಿ ಮೃತಪಟ್ಟ ಚಿನ್ಮಯಿ ಶೆಟ್ಟಿ ಉಪ್ಪಿನಂಗಡಿಯ ಇಳಂತಿಲ ಮೂಲದವರೆಂದು ತಿಳಿದು ಬಂದಿದೆ.
ಇಳಂತಿಲ ಅಂಡೆತ್ತಡ್ಕ ಮೂಲದ ಕರುಣಾಕರ ಶೆಟ್ಟಿ ಮತ್ತು ಕಾರ್ಕಳ ಹೆಬ್ರಿಯ ಪೂಜಾ ಶೆಟ್ಟಿಯವರ ಪುತ್ರಿ ಎಮದು ತಿಳಿದು ಬಂದಿದೆ. ಕರುಣಾಕರ ಶೆಟ್ಟಿಯವರು ಬೆಂಗಳೂರಿನಲ್ಲಿ ಉದ್ಯಮಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಕಾಲ್ತುಳಿತದಲ್ಲಿ ಗಂಭೀರ ಗಾಯಗೊಂಡಿದ್ದ ಚಿನ್ಮಯಿ ಶೆಟ್ಟಿಯವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆಗೆ ಸ್ಪಂದಿಸದ ಕಾರಣ ಅವರು ಸಾವನಪ್ಪಿದ್ದಾರೆ.ಬೆಂಗಳೂರಿನ ಕನಕಪುರ ರಸ್ತೆಯ ಜ್ಯೋತಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎರಡನೇ ವರ್ಷದ ಬಿಇ ವ್ಯಾಸಂಗ ಮಾಡುತ್ತಿದ್ದ ಚಿನ್ಮಯಿ ಶೆಟ್ಟಿ ಅತ್ಯುತ್ತಮ ಯಕ್ಷಗಾನ ಕಲಾವಿದೆಯೂ ಹಾಗೂ ಡ್ಯಾನ್ಸರ್ ಕೂಡ ಆಗಿದ್ದರು.ಮಾತ್ರವಲ್ಲದೇ ಇವರು ಬೆಂಗಳೂರಿನ ಯಕ್ಷತರಂಗ ತಂಡದ ವಿದ್ಯಾರ್ಥಿನಿಯಾಗಿದ್ದರು.
ಚಿನ್ಮಯಿ ಶೆಟ್ಟಿಯವರ ತಂದೆ ಕರುಣಾಕರ ಶೆಟ್ಟಿಯವರು ಮೂಲತ: ಸೋಮವಾರಪೇಟೆ ನಿವಾಸಿಯಾಗಿದ್ದು ಕೆಲವರ್ಷಗಳ ಹಿಂದೆ ಇಳಂತಿಲದಲ್ಲಿ ಜಾಗ ಖರೀದಿಸಿ ಮನೆ ಮಾಡಿದ್ದರು.
ಬೆಂಗಳೂರಿನಲ್ಲಿ ಉದ್ಯಮಿಯಾಗಿರುವ ಕರುಣಾಕರ ಶೆಟ್ಟಿಯವರು ಕುಟುಂಬದೊಂದಿಗೆ ಬೆಂಗಳೂರುನಲ್ಲಿಯೇ ವಾಸ್ತವ್ಯವಿದ್ದು, ಅಂಡೆತ್ತಡ್ಕದಲ್ಲಿ ಅವರ ತಾಯಿ ಮತ್ತು ಮಗಳ ಮಗ ವಾಸ್ತವ್ಯವಿದ್ದಾರೆ.ವಿಷಯ ತಿಳಿದು ಅವರು ಬೆಂಗಳೂರಿಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.