Latestಕ್ರೀಡೆಕ್ರೀಡೆ/ಸಿನಿಮಾಕ್ರೈಂರಾಜಕೀಯರಾಜ್ಯವೈರಲ್ ನ್ಯೂಸ್

ಆರ್ ಸಿಬಿ ಅಭಿಮಾನಿಗಳ ಸಾವಿನ ಬಗ್ಗೆ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್..! ವಿಚಾರಣೆ ಜೂ.10ಕ್ಕೆ ಮುಂದೂಡಿಕೆ..!

413

ನ್ಯೂಸ್ ನಾಟೌಟ್: ಐಪಿಎಲ್ ಟ್ರೋಫಿ ಗೆದ್ದ ಆರ್‌ಸಿಬಿ ತಂಡದ ವಿಜಯೋತ್ಸವ ಆಚರಣೆ ವೇಳೆ ಬುಧವಾರ (ಜೂನ್ 4) ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತಕ್ಕೆ ಸಿಲುಕಿ 11 ಜನ ಸಾವೀಗೀಡಾದ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.

ಈ ಬಗ್ಗೆ ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ. ಕಾಮೇಶ್ವರ ರಾವ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ಮಧ್ಯಾಹ್ನ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸರ್ಕಾರದ ಪರ ಹಾಜರಿದ್ದ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ ಶೆಟ್ಟಿ, ಸರ್ಕಾರ ಕೈಗೊಂಡಿದ್ದ ಭದ್ರತಾ ಕ್ರಮಗಳ ಬಗ್ಗೆ ನ್ಯಾಯಪೀಠಕ್ಕೆ ಮಾಹಿತಿ ನೀಡಿದರು. ಲೋಪದೋಷಗಳ ಬಗ್ಗೆ ಮತ್ತು ನಿಖರ ಕಾರಣಗಳ ಬಗ್ಗೆ ಮತ್ತು ಹೊಣೆಗಾರಿಕೆಗಳ ಬಗ್ಗೆ ಸೂಕ್ತ ಉತ್ತರ ನೀಡುವಂತೆ ಕೋರ್ಟ್ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಇದೇ ವೇಳೆ ಹಲವರ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ಮನವಿಯನ್ನೂ ಆಲಿಸಿದ ನ್ಯಾಯಪೀಠ, ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ಅಡ್ವೊಕೇಟ್ ಜನರಲ್ ಅವರಿಗೆ ನಿರ್ದೇಶಿಸಿ ವಿಚಾರಣೆಯನ್ನು ಇದೇ 10ಕ್ಕೆ (ಮಂಗಳವಾರ) ಮುಂದೂಡಿತು.

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತದಿಂದ ಸಾವನ್ನಪ್ಪಿದವರ ಕುಟುಂಬಕ್ಕೆ ಒಟ್ಟು 25 ಲಕ್ಷ ರೂ. ಪರಿಹಾರ ಘೋಷಣೆ..! ಗಾಯಾಳುಗಳ ನೆರವಿಗೆ ‘ಆರ್‌ ಸಿಬಿ ಕೇರ್ಸ್’ ಎಂಬ ನಿಧಿ ರಚನೆ

ಕಾಲ್ತುಳಿತ ಪ್ರಕರಣ: ಮಕ್ಕಳ ಸಾವು ನೆನೆದು ಕಣ್ಣೀರಿಟ್ಟ ಡಿಕೆಶಿ..! ಮಕ್ಕಳ ತಾಯಿ ಮಾತನಾಡಿದ್ದನ್ನ ನನ್ನಿಂದ ಸಹಿಸಲು ಆಗ್ತಿಲ್ಲ ಎಂದ ಡಿಸಿಎಂ..!

See also  ವಿಷದ ಹಾವು ಕಚ್ಚಿ ಗೋಳಿತೊಟ್ಟು ಗ್ರಾಂ.ಪಂ.ಸದಸ್ಯೆ ಸಾವು
  Ad Widget   Ad Widget     Ad Widget   Ad Widget   Ad Widget   Ad Widget