Latestದೇಶ-ವಿದೇಶಬೆಂಗಳೂರುರಾಜ್ಯವೈರಲ್ ನ್ಯೂಸ್

RCB ಗೆದ್ದಿದ್ದಕ್ಕೆ 2 ಕ್ವಿಂಟಲ್ ಚಿಕನ್ ಮಾಡಿಸಿ ಇಡೀ ಊರಿಗೆ ಬಾಡೂಟ ಹಾಕಿಸಿದ ಯುವಕರು..! ಕಾಲ್ತುಳಿತದಲ್ಲಿ ಮೃತಪಟ್ಟ 11 ಜನರಿಗೂ ಶ್ರದ್ಧಾಂಜಲಿ..!

5.8k

ನ್ಯೂಸ್ ನಾಟೌಟ್: ಐಪಿಎಲ್‌ ನ ಫೈನಲ್‌ ಪಂದ್ಯದಲ್ಲಿ ಆರ್‌ ಸಿಬಿ ಗೆಲುವು ಸಾಧಿಸಿದ್ದಕ್ಕೆ ಕೊಪ್ಪಳ ತಾಲೂಕಿನ ಬಂಡಿಹರ್ಲಾಪುರ ಯುವಕರು ಊರಿಗೆ ಬಾಡೂಟ ಹಾಕಿದ್ದಾರೆ. ಇದೇ ವೇಳೆ ಕಾಲ್ತುಳಿತದಲ್ಲಿ ಮೃತಪಟ್ಟ 11 ಜನರಿಗೂ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಆರ್‌ ಸಿಬಿ ಕಪ್‌ ಗೆದ್ದ ದಿನವೇ ಬಾಡೂಟ ಹಾಕಿಸಬೇಕು ಎಂದುಕೊಂಡಿದ್ದರು. ಆದರೆ ಅಂದು ತಡರಾತ್ರಿಯಾಗಿದ್ದರಿಂದ ಆಗಲಿಲ್ಲ. ಮರುದಿನ ಮಾಡಿಸಲು ನಿರ್ಧರಿಸಿದ್ದರು. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ 11 ಜನರು ಮೃತಪಟ್ಟಿದ್ದರಿಂದ ಕೈಬಿಡಲಾಗಿತ್ತು. ಇದೀಗ ಗುರುವಾರ(ಜೂ.5) ಬಾಡೂಟ ಹಾಕುವ ಜತೆಗೆ ದುರಂತದಲ್ಲಿ ಮೃತಪಟ್ಟವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲೆಂದು ದೇವರಲ್ಲಿ ಪ್ರಾರ್ಥಿಸಿದ್ದಾರೆ.

ಆರ್‌ಸಿಬಿ ಫೈನಲ್‌ ಪ್ರವೇಶಿಸುತ್ತಿದ್ದಂತೆ ಗ್ರಾಮದ ಯುವಕರೆಲ್ಲರೂ ಸೇರಿ ಈ ಬಾರಿ ಕಪ್‌ ಗೆದ್ದರೇ ಊರಿಗೆ ಬಾಡೂಟ ಹಾಕೋಣವೆಂದು ಮಾತನಾಡಿಕೊಂಡಿದ್ದಾರೆ. ಅದರಂತೆ ಆರ್‌ ಸಿಬಿ ಫೈನಲ್‌ ನಲ್ಲಿ ಗೆಲುವು ಸಾಧಿಸಿದ್ದರಿಂದ ಎಲ್ಲರೂ ಸೇರಿ 2 ಕ್ವಿಂಟಲ್‌ ಚಿಕನ್‌ ಮತ್ತು 2 ಕ್ವಿಂಟಲ್‌ ಪಲಾವ್‌ ಮಾಡಿ ಇಡೀ ಗ್ರಾಮದ ಜನರಿಗೆ ಬಾಡೂಟ ಹಾಕಿಸಿದ್ದಾರೆ.

ಬೆಂಗಳೂರಿಗೆ ನಾಲ್ಕೂವರೆ ಸಾವಿರ ಎಲೆಕ್ಟ್ರಿಕ್ ಬಸ್​ ನೀಡುತ್ತೇನೆ ಎಂದ ಹೆಚ್.​ಡಿ ಕುಮಾರಸ್ವಾಮಿ..! ಪ್ರತಿ ಪಂಚಾಯಿತಿ ಮಟ್ಟದಲ್ಲಿ ಉಚಿತ ಇಂಗ್ಲಿಷ್ ಶಾಲೆ..?

ಮಡೆನೂರು ಮನು ಜೈಲಿನಿಂದ ರಿಲೀಸ್..! ಶಿವಣ್ಣ ಮತ್ತು ದರ್ಶನ್ ಬಗೆಗಿನ ಆಡಿಯೋ ನನ್ನದಲ್ಲ ಎಂದ ಮನು..!

 

See also  ಪತಿಯ ವಿಕೃತಿಗೆ ಮನನೊಂದು ನವವಿವಾಹಿತೆ ಆತ್ಮಹತ್ಯೆ, ಲೈಂಗಿಕ ವೀಡಿಯೊಗಳನ್ನು ತೋರಿಸಿ ಚಿತ್ರಹಿಂಸೆ
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget