Uncategorized

ಅಕ್ರಮ ನೇಮಕಾತಿ ಸಂಬಂಧ, PSI ಹುದ್ದೆಗಳಿಗೆ ಮರು ಪರೀಕ್ಷೆ

ಬೆಂಗಳೂರು: ರಾಜ್ಯದಲ್ಲಿ 545 PSI (ಪೊಲೀಸ್ ಸಬ್ ಇನ್ಸ್ ಪೆಕ್ಟರ್) ಹುದ್ದೆಗಳ ಅಕ್ರಮ ನೇಮಕಾತಿ ಭಾರಿ ವಿವಾದಕ್ಕೆ ಕಾರಣವಾಗಿತ್ತು. ಇದೀಗ ಈ ವಿಚಾರಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರಕಾರ ಗಂಭೀರ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಈ ಪ್ರಕಾರವಾಗಿ ಪರೀಕ್ಷೆ ಯನ್ನು ರದ್ದುಗೊಳಿಸಿ ಮರು ಪರೀಕ್ಷೆ ನಡೆಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಮಾಧ್ಯಮ ಗೋಷ್ಠಿ ಯನ್ನು ಇಂದು ಉದ್ದೇಶಿಸಿ ಮಾತನಾಡಿದ ಅವರು, ಈ ಹಿಂದೆ ಪರೀಕ್ಷೆ ಬರೆದಿದ್ದ ಎಲ್ಲಾ 54289 ಪರೀಕ್ಷಾರ್ಥಿ ಗಳು ಮತ್ತೂಮ್ಮೆ ಪರೀಕ್ಷೆ ಬರೆಯಲು ಅವಕಾಶ ಪಡೆಯಲಿದ್ದಾರೆ. ಆದರೆ ಸಿಐಡಿ ಯಿಂದ ಬಂಧಿತರಾದ ಅಭ್ಯರ್ಥಿಗಳಿಗೆ ಮರು ಪರೀಕ್ಷೆಯಿಂದ ಹೊರಗಿಡಲಾಗುವುದು.ಮರು ಪರೀಕ್ಷೆಯ ದಿನಾಂಕವನ್ನು ಶೀಘ್ರದಲ್ಲೇ ನಿಗದಿಗೊಳಿ ಸಲಾಗುವುದು ಎಂದು ತಿಳಿಸಿದ್ದಾರೆ.

Related posts

ಕೋಳಿಗೆ ಟಿಕೆಟ್ ಕೊಟ್ಟ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಕಂಡೆಕ್ಟರ್..! ಪ್ರಯಾಣಿಕ ಮಾಡಿದ್ದೇನು ಗೊತ್ತಾ?

ರಾಜ್ಯದ ಪಿಡಿಒಗಳ ಹೆಗಲಿಗೇರಿದೆ ಹೊಸ ಜವಾಬ್ದಾರಿ

ಸುಳ್ಯ: ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ, ಗಮನ ಸೆಳೆದ ಎನ್.ಎಮ್.ಸಿ ಕಲೋತ್ಸವ 2k24