ನ್ಯೂಸ್ ನಾಟೌಟ್ : ಸುಳ್ಯದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಯ ಆಶ್ರಯದಲ್ಲಿ ಅ.3 ರಂದು ಗಾಂಧಿಸ್ಮೃತಿ ಕಾರ್ಯಕ್ರಮ ಹಾಗೂ ಜಿಲ್ಲಾ ಮಟ್ಟದ ಸಮಾವೇಶವು ನಡೆಯಲಿದೆ.ಈ ಪ್ರಯುಕ್ತ ಧರ್ಮಸ್ಥಳದಲ್ಲಿ ಆಮಂತ್ರಣ ಪತ್ರಿಕೆಯನ್ನು ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಇಂದು ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ದ.ಕ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷ ಪದ್ಮನಾಭ ಶೆಟ್ಟಿ, ಮಾಜಿ ಜಿಲ್ಲಾಧ್ಯಕ್ಷ ಎನ್.ಎ. ರಾಮಚಂದ್ರ, ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್, ಸುಳ್ಯ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಲೋಕನಾಥ್ ಆಮೇಚೂರ್,ಜಿಲ್ಲಾ ನಿರ್ದೇಶಕ ಪ್ರವೀಣಕುಮಾರ್, ಸುಳ್ಯ ಕೇಂದ್ರ ಒಕ್ಕೂಟದ ಅಧ್ಯಕ್ಷ ಸುರೇಶ್ ಕಣೆಮರಡ್ಕ, ತಾಲೂಕು ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ಮಹೇಶ್ ರೈ ಮೇನಾಲ,ಭಜನಾ ಪರಿಷತ್ ನಿರ್ದೇಶಕ ಬೂಡು ರಾಧಾಕೃಷ್ಣ ರೈ, ತಾಲೂಕು ಯೋಜನಾಧಿಕಾರಿ ನಾಗೇಶ್ .ಪಿ. ಉಪಸ್ಥಿತರಿದ್ದರು.