ಕರಾವಳಿರಾಜಕೀಯ

ಜಿಲ್ಲಾದ್ಯಂತ ಸರ್ಕಾರಿ ಪ್ರಾಯೋಜಿತ ಫ್ಲೆಕ್ಸ್‌, ಬ್ಯಾನರ್‌, ಬಂಟಿಂಗ್ಸ್ ತೆರವು

ನ್ಯೂಸ್ ನಾಟೌಟ್: ಕರ್ನಾಟಕ ವಿಧಾನಸಭಾ ಚುನಾವಣೆ ಮೇ 10ರಂದು ನಡೆಯಲಿದೆ. ಈ ನಿಟ್ಟಿನಲ್ಲಿ ನೀತಿ ಸಂಹಿತೆ ಜಾರಿಯಾಗಿದ್ದು, ಸರ್ಕಾರದ ಅನುದಾನ ಬಳಸಿಕೊಂಡು ಜಿಲ್ಲಾದ್ಯಂತ ಹಾಕಿರುವ ಜಾಹೀರಾತು, ಫ್ಲೆಕ್ಸ್, ಬ್ಯಾನರ್ ಹಾಗೂ ಬಂಟಿಂಗ್ಸ್ ಗಳನ್ನು ಕೂಡಲೇ ತೆರವುಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ದ.ಕ. ಜಿಲ್ಲಾ ಪಂಚಾಯತ್ ಸಿಇಒ ಡಾ. ಕುಮಾರ್ ಸೂಚನೆ ನೀಡಿದ್ದಾರೆ.

ಈ ಕುರಿತು ಬುಧವಾರ ಹಮ್ಮಿಕೊಂಡಿದ್ದ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಮಾತನಾಡಿದ ಅವರು, ಸಾರ್ವಜನಿಕ ಸ್ಥಳ, ಸರ್ಕಾರಿ ಕಚೇರಿ, ಅಧಿಕೃತ ವೆಬ್‍ಸೈಟ್‍ಗಳಲ್ಲಿ ಹಾಕಲಾಗಿರುವ ರಾಜಕೀಯ ಪಕ್ಷಗಳ ಮುಖಂಡರ ಭಾವಚಿತ್ರಗಳು, ಸರ್ಕಾರಿ ಜಾಹೀರಾತುಗಳನ್ನು ಈ ಕೂಡಲೇ ತೆರವುಗೊಳಿಸುವಂತೆ ಸೂಚಿಸಿದರು. ತೆರವು ಮಾಡಲಾದ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್‌ ಹಾಗೂ ಕಟೌಟ್‍ಗಳನ್ನು ಪುನಃ ಅಳವಡಿಸಿದ್ದಲ್ಲಿ ಪ್ರಜಾಪ್ರತಿನಿಧಿ ಕಾಯ್ದೆ ಹಾಗೂ ಕರ್ನಾಟಕ ತೆರೆದ ಸ್ಥಳಗಳ ಕಾಯ್ದೆ-1981ರಂತೆ ಕಾನೂನು ಕ್ರಮ ಅನುಷ್ಠಾನಗೊಳಿಸಬೇಕು ಎಂದಿದ್ದಾರೆ.

ಅಧಿಕಾರಿಗಳು ಕೈಗೊಂಡ ಕ್ರಮಗಳ ಬಗ್ಗೆ ತಕ್ಷಣ ವರದಿ ಸಲ್ಲಿಸಬೇಕು. ಅಧಿಕಾರಿಗಳು ಚುನಾವಣಾ ಕರ್ತವ್ಯವನ್ನು ನಿರ್ಲಕ್ಷ್ಯ ವಹಿಸದದೆ ಗಂಭೀರವಾಗಿ ಪರಿಗಣಿಸಬೇಕು. ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಚುನಾವಣಾಧಿಕಾರಿಗಳು, ಸಹಾಯಕ ಚುನಾವಣಾ ಅಧಿಕಾರಿಗಳು, ತಹಶೀಲ್ದಾರರು, ಸಂಬಂಧಪಟ್ಟ ತಾಲೂಕು ಪಂಚಾಯತ್ ಕಾರ್ಯನಿರ್ವಣಾಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಪುರಸಭೆಗಳ ಮುಖ್ಯಾಧಿಕಾರಿಗಳು ಭಾಗವಹಿಸಿದ್ದರು.

Related posts

ಮೀನಿನ ಲಾರಿಗೆ ಸ್ಕೂಟಿ ಡಿಕ್ಕಿ,21 ವರ್ಷದ ಯುವಕ ದುರಂತ ಅಂತ್ಯ

ಪುತ್ತೂರು ವ್ಯಕ್ತಿ ಹೃದಯಾಘಾತದಿಂದ ಸೌದಿ ಅರೇಬಿಯಾದಲ್ಲಿ ಮೃತ್ಯು

ಈ ಮದುವೆಯಲ್ಲಿ ವಧು-ವರ ಇಬ್ಬರೂ ಇರ್ತಾರೆ..ಆದ್ರೆ ಕಾಣಿಸಲ್ಲ..! ಏನಿದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ನಡೆಯುವ ಪ್ರೇತಾತ್ಮಗಳ ವಿಚಿತ್ರ ವಿವಾಹ..?