ಕ್ರೈಂಬೆಂಗಳೂರುವೈರಲ್ ನ್ಯೂಸ್ಸಿನಿಮಾ

ದರ್ಶನ್ ಪ್ರಕರಣದಲ್ಲಿ ಇನ್ನೂ ಮುಗಿದಿಲ್ಲ ಸಾಕ್ಷಿಗಳ ಹುಡುಕಾಟ..! ಪವಿತ್ರಾಗೌಡ ಚಪ್ಪಲಿಯಲ್ಲೂ ರೇಣುಕಾಸ್ವಾಮಿ ರಕ್ತದ ಕಲೆ ಪತ್ತೆ..!

237

ನ್ಯೂಸ್ ನಾಟೌಟ್: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಸಂಗಡಿಗರ ಬಗ್ಗೆ ಸಾಕ್ಷಿಗಳ ಹುಡುಕಾಟ ಇನ್ನೂ ಮುಗಿದಿಲ್ಲ ಎನ್ನಲಾಗಿದ್ದು, ಆರೋಪಿ ಪವಿತ್ರಾಗೌಡಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ನಟಿಯ ಚಪ್ಪಲಿಯಲ್ಲಿ ರೇಣುಕಾಸ್ವಾಮಿ ರಕ್ತದ ಕಲೆ ಪತ್ತೆಯಾಗಿದೆ.

ಪವಿತ್ರಾಗೌಡ ಮನೆಯಲ್ಲಿ ಕೊಲೆ ದಿನ ಆಕೆ ಧರಿಸಿದ್ದ ಚಪ್ಪಲಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ಅದನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿತ್ತು. ಚಪ್ಪಲಿ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆ ಇರುವುದು ಪತ್ತೆಯಾಗಿದೆ.

ಪವಿತ್ರಾಗೌಡ ವಿರುದ್ಧ ಈ ಚಪ್ಪಲಿ ಪ್ರಬಲ ಸಾಕ್ಷಿಯಾಗಲಿದೆ. ಪಟ್ಟಣಗೆರೆ ಶೆಡ್‌ಗೆ ಹೋಗಿ ರೇಣುಕಾಸ್ವಾಮಿಗೆ ಚಪ್ಪಲಿಯಲ್ಲಿ ಹೊಡೆದಿದ್ದ ಆರೋಪ ನಟಿ ಮೇಲಿತ್ತು. ಈಗ ಅದೇ ಚಪ್ಪಲಿ ಮೇಲೆ ಕೊಲೆಯಾದ ವ್ಯಕ್ತಿಯ ರಕ್ತದ ಕಲೆ ಇರುವುದು ತಿಳಿದುಬಂದಿದೆ. ಇನ್ನು, ಕೊಲೆ ಪ್ರಕರಣ ಸಂಬಂಧ ದರ್ಶನ್‌ ಆಪ್ತ ಬಳಗದ ಮತ್ತೊಬ್ಬ ನಟನ ಸಾಕ್ಷಿ ಹೇಳಿಕೆಯನ್ನು ನ್ಯಾಯಾಲಯದಲ್ಲಿ ಸಿಆರ್‌ಪಿಸಿ 164ರಡಿ ಪೊಲೀಸರು ದಾಖಲಿಸಿದ್ದಾರೆ. ಹತ್ಯೆಗೂ ಮುನ್ನ ದರ್ಶನ್‌ ಜೊತೆ ಭೋಜನ ಕೂಟದಲ್ಲಿ ಭಾಗಿಯಾಗಿದ್ದ ಕಾರಣಕ್ಕೆ ನಟ ಯಶಸ್‌ ಅವರನ್ನು ಸಾಕ್ಷಿಯಾಗಿ ಪರಿಗಣಿಸಿ ಪೊಲೀಸರು ಹೇಳಿಕೆ ಪಡೆದಿದ್ದಾರೆ.

See also  ನ್ಯಾಯಾಲಯದ ತೀರ್ಪನ್ನೇ ತಿದ್ದಿದ್ದೇಕೆ ಸ್ವಾಮೀಜಿ..? ಸ್ವಾಮಿಜಿ ವಿರುದ್ಧ ಕ್ರಿಮಿನಲ್‌ ಕೇಸ್ ಗೆ ಆದೇಶಿಸಿದ ಜಿಲ್ಲಾಧಿಕಾರಿ! ಯಾರು ಆ ಸ್ವಾಮೀಜಿ?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget