Latestದೇಶ-ವಿದೇಶವಾಣಿಜ್ಯ

ಸತತ 3ನೇ ಬಾರಿ ರೆಪೋ ದರ ಇಳಿಸಿದ ಆರ್ ಬಿಐ..! ಗೃಹ ಸಾಲ, ಇಎಂಐ ಗಳ ಬಡ್ಡಿದರದಲ್ಲಿ ಇಳಿಕೆ..!

495

ನ್ಯೂಸ್ ನಾಟೌಟ್: ದೇಶದ ಜಿಡಿಪಿಗೆ ಮತ್ತಷ್ಟು ಉತ್ತೇಜನ ನೀಡುವ ನಿಟ್ಟಿನಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಸತತ 3ನೇ ಬಾರಿಗೆ ರೆಪೋ ದರ (Repo Rate) ಕಡಿತಗೊಳಿಸಿದೆ. ನಿರೀಕ್ಷೆಗೂ ಮೀರಿ 50 ಬೇಸಿಸ್ ಪಾಯಿಂಟ್‌ ಕಡಿತಗೊಳಿಸಿದ್ದು ರೆಪೋ ಬಡ್ಡಿ ದರ ಶೇ.6 ರಿಂದ ಶೇ.5.50ಕ್ಕೆ ಇಳಿಕೆಯಾಗಿದೆ.

ಆರ್‌ ಬಿಐನ ಹಣಕಾಸು ನೀತಿ ಸಮಿತಿಯು (MPC) ಸಭೆಯ ಬಳಿಕ 50 ಮೂಲಾಂಶದಷ್ಟು (ಬೇಸಿಸ್‌ ಪಾಯಿಂಟ್‌) ರೆಪೋ ದರ ಕಡಿಮೆ ಮಾಡಲು ನಿರ್ಧರಿಸಿರುವುದಾಗಿ ಆರ್‌ ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ತಿಳಿಸಿದ್ದಾರೆ.

ಇದರಿಂದ ಸಾಲ ಮತ್ತು ಇಎಂಐಗಳ ಬಡ್ಡಿ ದರವೂ ಇಳಿಕೆಯಾಗಲಿದೆ. ಜೊತೆಗೆ ಹೊಸ ಸಾಲಗಾರರಿಗೆ ಗೃಹ ಸಾಲಗಳು, ವಾಹನದ ಮೇಲಿನ ಸಾಲಗಳು ಕಡಿಮೆ ಬಡ್ಡಿ ದರದಲ್ಲಿ ಸಿಗಲಿದೆ. ಆಟೊ ಮೋಬೈಲ್, ಕಾರ್ಪೊರೇಟ್ ಸಾಲಗಳ ಮೇಲಿನ ಮರುಪಾವತಿ ಕಂತುಗಳಲ್ಲಿಯೂ ಇಳಿಕೆಯಾಗುವ ನಿರೀಕ್ಷೆ ಇದೆ.

ರೆಪೋ ದರದಲ್ಲಿ ಶೇ 0.25ರಷ್ಟು ಇಳಿಕೆ ಆಗಬಹುದೆಂದು ತಜ್ಞರು ನಿರೀಕ್ಷಿಸಿದ್ದರು. ಆದ್ರೆ ಆರ್‌ ಸಿಬಿ ನಿರೀಕ್ಷೆಗೂ ಮೀರಿ ಇಳಿಕೆ ಮಾಡಿದೆ. ಜಿಡಿಪಿಯು 4 ವರ್ಷದ ಕನಿಷ್ಠ ಮಟ್ಟ ಶೇ 6.5ಕ್ಕೆ ಕುಸಿದಿತ್ತು. ಹೀಗಾಗಿ ಜಿಡಿಪಿ ಉತ್ತೇಜನಕ್ಕೆ ಕ್ರಮ ಕೈಗೊಳ್ಳುವ ಭಾಗವಾಗಿ ರೆಪೋ ದರ ಕಡಿತಗೊಳಿಸಿದೆ. ಇದು ಕಳೆದ ಮೂರು ವರ್ಷಗಳಲ್ಲಿ ಹೆಚ್ಚಿನ ಇಳಿಕೆ ಕೂಡ ಆಗಿದೆ ಎಂದು ತಿಳಿದುಬಂದಿದೆ. 2022ರ ಆಗಸ್ಟ್ 5 ರಂದು ರೆಪೋ ದರವು ಶೇ 5.40ರಷ್ಟಿತ್ತು.

ಈ ವರ್ಷದ ಫೆಬ್ರವರಿಯಿಂದ ಆರ್‌ಬಿಐ ರೆಪೋ ದರದಲ್ಲಿ 100 ಮೂಲಾಂಶದಷ್ಟು ಕಡಿತ ಮಾಡಿದೆ. ಏಪ್ರಿಲ್‌ನಲ್ಲಿ 25 ಬೇಸಿಸ್‌ ಪಾಯಿಂಟ್‌ ಕಡಿತಗೊಳಿಸಲಾಗಿತ್ತು. ಆಗ ರೆಪೋ ದರ ಶೇ. 6ಕ್ಕೆ ಇಳಿದಿತ್ತು.

ಧರ್ಮಸ್ಥಳ: ಕಾಡಾನೆ ದಾಳಿಗೆ ರಿಕ್ಷಾ ನಜ್ಜುಗುಜ್ಜು..! ರಿಕ್ಷಾದ ಸ್ಥಿತಿ ಕಂಡು ಕುಸಿದು ಬಿದ್ದ ಚಾಲಕ..!

See also  ಸುಳ್ಯ :47ನೇ ವರ್ಷದ ಎನ್. ಎಸ್. ಎಸ್ ವಿಶೇಷ ವಾರ್ಷಿಕ ಶಿಬಿರ:ಮಂಡೆಕೋಲು ಗ್ರಾಮದ ಸ. ಕಿ.ಪ್ರಾ. ಶಾಲೆ ಕನ್ಯಾನದಲ್ಲಿ ಫೆ.22ರಂದು ಉದ್ಘಾಟನೆ
  Ad Widget     Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget