ಕೆವಿಜಿ ಕ್ಯಾಂಪಸ್‌

ಸುಳ್ಯ: ಕೆ.ವಿ.ಜಿ. ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ 76ನೇ ಗಣರಾಜ್ಯೋತ್ಸವ

148

ನ್ಯೂಸ್ ನಾಟೌಟ್ : ಸುಳ್ಯದ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯಲ್ಲಿ 76ನೇ ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಭಾನುವಾರ (ಜ. 26) ಆಚರಿಸಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಇದರ ಅಧ್ಯಕ್ಷ ಡಾ. ಕೆ. ವಿ. ಚಿದಾನಂದ ಧ್ವಜಾರೋಹಣ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಎಒಎಲ್‌ಇ ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಚಂದ್ರಶೇಖರ ಪೇರಾಲ್, ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ ಇದರ ಪ್ರಾಂಶುಪಾಲ ಡಾ. ಲೀಲಾಧರ್ ಡಿ. ವಿ., ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಡಾ. ಹರ್ಷಿತಾ ಎಂ., ಎನ್ ಎನ್ ಎಸ್ ಯೋಜನಾಧಿಕಾರಿಯಾದ ಡಾ. ಪ್ರಮೋದ ಪಿ ಎ., ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಿ. ಶೀತಲ್ ಗೌಡ ಎಸ್., ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಕು. ಲಕ್ಷ್ಮೀ ಸುರೇಶ್, ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿ ನಾಯಕಿ ಡಾ. ಅನುಷಾ ಮಡಪ್ಪಾಡಿ ಹಾಗೂ ಸಂಸ್ಥೆಯ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗ, ಸ್ನಾತಕೋತ್ತರ ವಿದ್ಯಾರ್ಥಿಗಳು, ಕಲಿಕಾ ವೈದ್ಯರು, ಪದವಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

See also  ಸುಳ್ಯ: ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಗಣಪತಿ ಹವನ ಸಹಿತ ಧನ್ವಂತರಿ ಪೂಜೆ ಹಾಗೂ ಶಿಶ್ಯೋಪನಯನ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget