ನ್ಯೂಸ್ ನಾಟೌಟ್ : ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭ ಮೇಳಕ್ಕೆ ಹೋಗಿ ಹಿಂತಿರುಗುತ್ತಿದ್ದ ವೇಳೆ ಭೀಕರ ಅಪಘಾತ ಸಂಭವಿಸಿ ೯ ಮಂದಿ ಮೃತಪಟ್ಟಿರುವ ಘಟನೆ ಬಗ್ಗೆ ವರದಿಯಾಗಿದೆ.
ಮಧ್ಯಪ್ರದೇಶದ ಜಬಲ್ಪುರ ಮತ್ತು ಮೈಹಾರ್ ಜಿಲ್ಲೆಗಳಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಒಂಬತ್ತು ಜನರು ಸಾವನ್ನಪ್ಪಿದ್ದು ಐದು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಜಬಲ್‌ಪುರದಲ್ಲಿ ಮಿನಿ ಬಸ್‌ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಿಂದ ಆಂಧ್ರಪ್ರದೇಶಕ್ಕೆ ಹಿಂತಿರುಗುತ್ತಿದ್ದ ವಾಹನದಲ್ಲಿದ್ದ ಏಳು ಜನರು ಸಾವನ್ನಪ್ಪಿದ್ದಾರೆ.
ಇನ್ನು ಮೈಹಾರ್‌ನಲ್ಲಿ, ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 30 ರ ಕಾಂಚನಪುರ ಗ್ರಾಮದ ಬಳಿ ಬೆಳಿಗ್ಗೆ 4 ಗಂಟೆ ಸುಮಾರಿಗೆ ಅಪರಿಚಿತ ವಾಹನವೊಂದು ಎಸ್‌ಯುವಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಐದು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.ಎಲ್ಲಾ ಗಾಯಾಳುಗಳನ್ನು ಅಮರ್‌ಪತಾನ್‌ನಲ್ಲಿ ಪ್ರಾಥಮಿಕ ಚಿಕಿತ್ಸೆಯ ನಂತರ ಸತ್ನಾ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.