ಕ್ರೈಂದೇಶ-ವಿದೇಶರಾಜಕೀಯರಾಜ್ಯವೈರಲ್ ನ್ಯೂಸ್

ರೇವಣ್ಣ ಬಂಧನ ಹಿನ್ನೆಲೆ ಸ್ವಕ್ಷೇತ್ರದಲ್ಲಿ ಇಂದು(ಫೆ.5) ಜೆಡಿಎಸ್ ಪ್ರತಿಭಟನೆ..! ಕಿಡ್ನ್ಯಾಪ್ ಆಗಿದ್ದ ಮಹಿಳೆಗೆ ಕೌನ್ಸಿಲಿಂಗ್

264

ನ್ಯೂಸ್ ನಾಟೌಟ್: ಹೊಳೆನರಸೀಪುರದ ಶಾಸಕ ಎಚ್ ಡಿ ರೇವಣ್ಣನವರನ್ನು ಎಸ್ಐಟಿ ಬಂಧಿಸಿರುವ ಹಿನ್ನೆಲೆಯಲ್ಲಿ ಸ್ಥಳೀಯ ಜೆಡಿಎಸ್ ಕಾರ್ಯಕರ್ತರು ಹೊಳೆನರಸೀಪುರ ತಾಲೂಕು ಕೇಂದ್ರದಲ್ಲಿ ಭಾನುವಾರ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದಾರೆ. ಬೆಳಗ್ಗೆ 10 ಗಂಟೆಗೆ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಆನಂತರ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸುವ ಸಾಧ್ಯತೆಗಳಿವೆ.

ಆ ಹಿನ್ನೆಲೆಯಲ್ಲಿ ತಾಲೂಕು ಕೇಂದ್ರದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಎಚ್ ಡಿ ರೇವಣ್ಣ ಕಿಡ್ನ್ಯಾಪ್ ಪ್ರಕರಣದಲ್ಲಿ ಸಂತ್ರಸ್ತೆಯಾಗಿರುವ ಮಹಿಳೆಯ ವಿಚಾರಣೆಗೆ ವಿಶೇಷ ತನಿಖಾ ತಂಡ (ಎಸ್ಐಟಿ) ಸಿದ್ಧತೆ. ಸದ್ಯಕ್ಕೆ ಬೆಂಗಳೂರಿನ ಸಾಂತ್ವನ ಕೇಂದ್ರದಲ್ಲಿರುವ ಮಹಿಳೆ. ಮಹಿಳೆಯನ್ನು ಸಿಐಡಿ ಕಚೇರಿಯಲ್ಲಿರುವ ಎಸ್ ಐಟಿ ಕಚೇರಿಗೆ ಕರೆತಂದು ವಿಚಾರಣೆ ನಡೆಸುವ ಸಾಧ್ಯತೆ.

ಮೊದಲು ಮಹಿಳೆಗೆ ಕೌನ್ಸಿಲಿಂಗ್ ನಡೆಸಿ ಆನಂತರ ವಿಚಾರಣೆ ನಡೆಸಲು ಎಸ್ಐಟಿ ಅಧಿಕಾರಿಗಳ ನಿರ್ಧಾರ. ನಾಳೆ (ಮೇ 6) ಜನಪ್ರತಿನಿಧಿ ನ್ಯಾಯಾಲಯದಲ್ಲಿ ಹೊಳೆನರಸೀಪುರದ ಶಾಸಕ ಎಚ್ ಡಿ ರೇವಣ್ಣರ ಜಾಮೀನು ಅರ್ಜಿಯನ್ನು ಜನಪ್ರತಿನಿಧಿ ನ್ಯಾಯಾಲಯದಲ್ಲಿ ಸಲ್ಲಿಸಲು ವಕೀಲರು ಸಜ್ಜಾಗಿದ್ದಾರೆ ಎನ್ನಲಾಗಿದೆ. ಮತ್ತೊಂದೆಡೆ, ರೇವಣ್ಣನವರನ್ನು ಬಂಧಿಸಿರುವ ಎಸ್ಐಟಿ ಪರ ವಕೀಲರು, ರೇವಣ್ಣ ಅವರನ್ನು ವಿಚಾರಣೆಗಾಗಿ ತಮ್ಮ ವಶಕ್ಕೆ ಕೊಡಬೇಕೆಂದು ಕೋರಿ ಅರ್ಜಿ ಸಲ್ಲಿಸಲಿದ್ದಾರೆ.

See also  ಅಂಬಾನಿ ಕುಟುಂಬ ಈಕೆಗೆ ನೀಡಿದ ಸಂಭಾವನೆ ಎಷ್ಟು ಕೋಟಿ ಗೊತ್ತಾ..? ಈಕೆ ಧರಿಸಿದ್ದ 7 ಲಕ್ಷ ರೂಪಾಯಿಯ ಈ ಹೆಡ್ ಫೋನ್ ನಲ್ಲಿ ಅಂತದ್ದೇನಿದೆ..?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget