Latestಸಿನಿಮಾ

‘ಶತ್ರುಗಳಿಂದ ನಿನ್ನ ಸಂಸಾರ ಹಾಳು ಮಾಡಲು ಯತ್ನ’!ಡಿವೈನ್ ಸ್ಟಾರ್ ರಿಷಬ್ ಶೆಟ್ಟಿಗೆ ಪಂಜುರ್ಲಿ ದೈವದ ಎಚ್ಚರಿಕೆ!

986

ನ್ಯೂಸ್‌ ನಾಟೌಟ್: ಕಾಂತಾರ ಸಿನಿಮಾ ಖ್ಯಾತಿಯ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿಗೆ ದೈವ ಎಚ್ಚರಿಕೆಯೊಂದನ್ನು ನೀಡಿದೆ. ‘ಜಗತ್ತಿನೆಲ್ಲೆಡೆ ನಿನಗೆ ದುಶ್ಮನ್ ಗಳಿದ್ದಾರೆ, ನಿನ್ನ ಸಂಸಾರ ಹಾಳು ಮಾಡಲು ಯತ್ನಿಸುತ್ತಿದ್ದಾರೆ. ನನಗೆ ಸೇವೆ ನೀಡುವ ಹರಕೆ ಹೇಳಿಕೋ, ಐದು ತಿಂಗಳ ಗಡುವಲ್ಲಿ ಒಳ್ಳೆದು ಮಾಡುತ್ತೇನೆ’ ಎಂದು ಪಂಜುರ್ಲಿ ದೈವ ಎಚ್ಚರಿಕೆಯನ್ನು ನೀಡಿದೆ.

ಮಂಗಳೂರಿನ ಕದ್ರಿ ಬಾರೆಬೈಲ್ ವಾರಾಹಿ ಪಂಜುರ್ಲಿ, ಜಾರಂದಾಯ ದೈವದ ವಾರ್ಷಿಕ ಉತ್ಸವದಲ್ಲಿ ಕುಟುಂಬ ಸಮೇತರಾಗಿ ಭಾಗಿಯಾದ ಕಾಂತಾರ ಸಿನಿಮಾ ನಟ ರಿಷಬ್ ಶೆಟ್ಟಿ ದೈವದ ಬಳಿ ಬೇಡಿಕೊಂಡಿದ್ದಾರೆ. ಇದೇ ವೇಳೆ ಬೆಳಗಿನ ಜಾವದವರೆಗೂ ದೈವದ ಉತ್ಸವದಲ್ಲಿ ಭಾಗಿಯಾಗಿದ್ದಾರೆ. ಉತ್ಸವದ ಕೊನೆಯಲ್ಲಿ ವಾರಾಹಿ ಪಂಜುರ್ಲಿ ದೈವದಲ್ಲಿ ರಿಷಬ್ ಶೆಟ್ಟಿ ಕಷ್ಟವನ್ನು ಹೇಳಿಕೊಂಡಿದ್ದಾರೆ. ರಿಷಬ್ ಶೆಟ್ಟಿ ಕಷ್ಟವನ್ನು ಆಲಿಸಿದ ಪಂಜುರ್ಲಿ ದೈವ ‘ಜಗತ್ತಿನೆಲ್ಲೆಡೆ ನಿನಗೆ ದುಶ್ಮನ್ ಗಳಿದ್ದಾರೆ, ನಿನ್ನ ಸಂಸಾರ ಹಾಳು ಮಾಡಲು ಯತ್ನಿಸುತ್ತಿದ್ದಾರೆ’ ಎಂದು ಶತ್ರುಗಳ ಕಾಟದ ಬಗ್ಗೆ ದೈವವು ಎಚ್ಚರಿಕೆ ನೀಡಿದೆ.

ಮತ್ತೂ ಮುಂದುವರೆದು, ‘ನನಗೆ ಸೇವೆ ನೀಡುವ ಹರಕೆ ಹೇಳಿಕೋ, ಮುಂದಿನ 5 ತಿಂಗಳ ಗಡುವಲ್ಲಿ ಒಳ್ಳೆದು ಮಾಡುತ್ತೇನೆ’ ಎಂದು ದೈವದಿಂದ ಅಭಯವನ್ನು ನೀಡಲಾಗಿದೆ. ಈ ಮೂಲಕ ರಿಷಬ್ ಶೆಟ್ಟಿ ದಂಪತಿ ವಾರಾಹಿ ಪಂಜುರ್ಲಿ ದೈವದ ಅಭಯದಿಂದ ಮನಸ್ಸಿಗೆ ಸ್ವಲ್ಪ ನೆಮ್ಮದಿ ತಂದುಕೊಂಡಿದ್ದಾರೆ. ನಟ ರಿಷಬ್ ಶೆಟ್ಟಿ ಇಬ್ಬರು ಮಕ್ಕಳೊಂದಿಗೆ ಬೆಂಗಳೂರಿನಿಂದಲೇ ದೈವದ ಉತ್ಸವಕ್ಕೆ ಹೋಗಿದ್ದರು ಎಂದು ತಿಳಿದು ಬಂದಿದೆ.

See also  ತುಳುನಾಡಿನ ಕಾರಣಿಕ ದೈವಗಳಲ್ಲೊಂದಾದ ಕೊರಗಜ್ಜನ ಕಟ್ಟೆಯಿಂದಲೇ ಕಳವು..!ಬೆಳ್ಳಿ ಮತ್ತು ತಾಮ್ರದ ಮುಟ್ಟಾಳೆ ಕದ್ದು ಪರಾರಿಯಾದ ಕಳ್ಳರು!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget