ಮಂಗಳೂರು: ಓವರ್ ಟೇಕ್ ಮಾಡುವ ಧಾವಂತದಲ್ಲಿ ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಬೆಳಗ್ಗೆ ಮಂಗಳೂರಿನ ಉಳ್ಳಾಲದ ಮಾಸ್ತಿಕಟ್ಟೆಯಲ್ಲಿ ನಡೆದಿದೆ. ಮೃತನನ್ನು ಮದನಿ ನಗರ ನಿವಾಸಿ ಮಹಮ್ಮದ್ ಕೈಫ್ (22) ಎಂದು ಗುರುತಿಸಲಾಗಿದೆ. ಆಟೋ ರಿಕ್ಷಾವನ್ನು ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ಕಂಬಕ್ಕೆ ಗುದ್ದಿದ ಬೈಕ್ ನಿಂದ ಸವಾರ ದೂರಕ್ಕೆ ಎಸೆಯಲ್ಪಟ್ಟಿದ್ದಾನೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರನ ತಲೆ ಜಖಂಗೊಂಡಿದ್ದು ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದಾನೆ.