ಬೆಂಗಳೂರು

ಪ್ರತಿಭಟನೆಗಾಗಿ ತೆರಳುತ್ತಿದ್ದ ಸ್ವಾಮೀಜಿ ಕಾರಿಗೆ ಅಪಘಾತ,ಇಬ್ಬರು ಸಾವು,ಸ್ವಾಮೀಜಿ ಗಂಭೀರ

ನ್ಯೂಸ್ ನಾಟೌಟ್ : ಕಾರು ಮತ್ತು ಕಂಟೇನರ್‌ಗಳ ಮಧ್ಯೆ ಭೀಕರ ಸರಣಿ ಅಪಘಾತದಲ್ಲಿ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳಗಾವಿ ತಾಲೂಕಿನ ಕಾಕತಿ ಗ್ರಾಮದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.ಘಟನೆಯಲ್ಲಿ ಕಾಡಸಿದ್ದೇಶ್ವರ ಮಠದ ಸ್ವಾಮೀಜಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ಬೆಳಗಾವಿ ತಾಲೂಕಿನ ಶಿವಾಪುರ ಗ್ರಾಮದ ಮುಪ್ಪಿನ ಕಾಡಸಿದ್ದೇಶ್ವರ ಮಠದ ಕಾಡಸಿದ್ದೇಶ್ವರ ಸ್ವಾಮೀಜಿ ಅವರು ತಮ್ಮ ಸಹಾಯಕರೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು.ಬೆಳಗಾವಿಯಲ್ಲಿ ಆಯೋಜನೆಗೊಂಡಿದ್ದ ಮತಾಂತರ ನಿಷೇಧ ಕಾಯ್ದೆ ರದ್ದು ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಲು ಸ್ವಾಮೀಜಿ ತೆರಳುತ್ತಿದ್ದರು ಎನ್ನಲಾಗಿದೆ.ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಆಶ್ರಯದಲ್ಲಿ ಪ್ರತಿಭಟನೆ ಆಯೋಜನೆಯಾಗಿತ್ತು.ಈ ವೇಳೆ ಅಪಘಾತ ಸಂಭವಿಸಿದೆ. ಅಪಘಾತದಿಂದ ಕಾರಿನಲ್ಲಿದ್ದ ಇಬ್ಬರು ತೀವ್ರ ಗಾಯಗಳೊಂದಿಗೆ ಪ್ರಾಣ ಕಳೆದುಕೊಂಡಿದ್ದಾರೆಂದು ತಿಳಿದು ಬಂದಿದೆ.ಸ್ವಾಮೀಜಿ ಅವರನ್ನು ಬೆಳಗಾವಿಯ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಲ್ಲಿ ಐಸಿಯುದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಕಾಕತಿ ಠಾಣೆ ಪೊಲೀಸರು ಭೇಟಿ ನೀಡಿದರು.

Related posts

Shakthi Yojane:ಮಹಿಳೆಯರೇ ,ಸ್ಮಾರ್ಟ್ ಕಾರ್ಡ್ ಇಲ್ಲಾಂದ್ರೆ ಫ್ರೀಯಾಗಿ ಓಡಾಡಕ್ಕಾಗಲ್ಲ;ಇದನ್ನು ಪಡೆಯುವುದು ಹೇಗೆ?ಎಲ್ಲಿ ಸಿಗಲಿದೆ?

ದೇಗುಲವೊಂದರ ಪ್ರಸಾದದಲ್ಲಿ ಸತ್ತ ಇಲಿ ಪತ್ತೆ..!ಏನಿದು ಘಟನೆ? ನಿಜವಾಗ್ಲೂ ಅಲ್ಲಿ ನಡೆದಿದ್ದೇನು?

ಸಿಸಿಬಿಗೆ ವರ್ಗಾವಣೆಯಾಗಿದ್ದ ಪೊಲೀಸ್‌ ಅಧಿಕಾರಿ ಆತ್ಮಹತ್ಯೆ..! ದಕ್ಷ ಅಧಿಕಾರಿಗಳಿಗೆ ಹೆಚ್ಚುತ್ತಿದೆಯೇ ಮಾನಸಿಕ ಕಿರುಕುಳ..?