ಕರಾವಳಿಕ್ರೈಂರಾಜ್ಯ

ಕರ್ನಾಟಕದ ಹಲವು ಆರ್.​ಟಿ.ಓ ಗಳ ಮೇಲೆ ಲೋಕಾಯುಕ್ತ ದಾಳಿ..! ಚೆಕ್ ಪೋಸ್ಟ್​​ ಸಿಬ್ಬಂದಿ ವಿರುದ್ಧ ಹಲವು ಭ್ರಷ್ಟಾಚಾರ ಆರೋಪ..!

200

ನ್ಯೂಸ್ ನಾಟೌಟ್: ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂ ಬೆಳಗ್ಗೆ ರಾಜ್ಯದ ಹಲವು ಆರ್​ಟಿಓ ಚೆಕ್ ಪೋಸ್ಟ್​​ಗಳ ಮೇಲೆ ದಾಳಿ ಮಾಡಿದ್ದಾರೆ. ಕೋಲಾರ, ಬೀದರ್, ವಿಜಯಪುರ ಮತ್ತು ಬಳ್ಳಾರಿ​​ ಜಿಲ್ಲೆಗಳಲ್ಲಿನ ಆರ್​ಟಿಓ ಚೆಕ್​​ ಪೋಸ್ಟ್​​ಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ, ಪರಿಶೀಲನೆ ನಡೆಸುತ್ತಿದ್ದಾರೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ತಾಡಿಗೋಳ ಕ್ರಾಸ್ ಬಳಿ ಇರುವ ಆರ್​ಟಿಓ ಚೆಕ್ ಪೋಸ್ಟ್ ಹಾಗೂ ಮುಳಬಾಗಿಲು ತಾಲೂಕು ನಂಗಲಿ ಆರ್​ಟಿಓ ಚೆಕ್ ಪೋಸ್ಟ್ ಮೇಲೆ ಕೋಲಾರ ಲೋಕಾಯುಕ್ತ ಎಸ್ಪಿ ಧನಂಜಯ ನೇತೃತ್ವದ ತಂಡ ದಾಳಿ ಮಾಡಿದೆ ಎಂದು ವರದಿ ತಿಳಿಸಿದೆ.

ಆರ್​ಟಿಓ ಚೆಕ್ ಪೋಸ್ಟ್​​ ಸಿಬ್ಬಂದಿ ವಿರುದ್ಧ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಸೂಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ. ಆರ್​ಟಿಓ ಚೆಕ್​ಪೋಸ್ಟ್ ​​ಗಳ ಮೇಲೆ ಅಧಿಕಾರಿಗಳು ಇಂದು (ಅ.08) ಬೆಳ್ಳಂ ಬೆಳಗ್ಗೆ ದಾಳಿ ಮಾಡಿ, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಎರಡೂ ಚೆಕ್ ಪೋಸ್ಟ್​​ಗಳಲ್ಲಿ ಸುಮಾರು 20 ಸಾವಿರಕ್ಕೂ ಅಧಿಕ ಹಣ ಪತ್ತೆಯಾಗಿದೆ. ಅಧಿಕಾರಿಗಳಿಂದ ಪರಿಶೀಲನೆ ಮುಂದುವರೆದಿದೆ.

ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಟಣದಲ್ಲಿರುವ ಆರ್​ಟಿಓ ಚೆಕ್ ಪೋಸ್ಟ್​​ನಲ್ಲಿನ ಸಿಬ್ಬಂದಿ ವಿರುದ್ಧ ಲಂಚ ಪಡೆದ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಇಂದು ನಸುಕಿನ ಜಾವ 4 ಗಂಟೆ ಸುಮಾರಿಗೆ ಬೀದರ್ ಹಾಗೂ ಕಲಬುರಗಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ಲೋಕಾಯುಕ್ತ ಎಸ್ಪಿ ಬಿ.ಕೆ. ಉಮೇಶ್, ಕಲಬುರಗಿ ಲೋಕಾಯುಕ್ತ ಡಿವೈಎಸ್​ಪಿ ಗೀತಾ ಬೀದರ್ ಮತ್ತು ಡಿವೈಎಸ್​ಪಿ ಹಣುಮಂತರಾಯ ನೇತೃತ್ವದ 4 ತಂಡದಿಂದ ಪರಿಶೀಲನೆ ನಡೆಯುತ್ತಿದೆ. ಇನ್ನೂ ಹಲವು ಜಿಲ್ಲೆಗಳ RTO ಚೆಕ್ ಪೋಸ್ಟ್ ಗಳ ಮೇಲೆ ದಾಳಿ ನಡೆದಿದೆ.

Click

https://newsnotout.com/2024/10/cake-and-food-poisoning-order-cancel-viral-news/
https://newsnotout.com/2024/10/baby-and-perents-pilgrims-kannada-news-12-years-matter-ka/
https://newsnotout.com/2024/10/political-kannada-news-viral-news-vinesh-pogat-kannada-news-hariyan/
https://newsnotout.com/2024/10/theef-kannada-news-different-way-of-approch-viral-bengaluru/
https://newsnotout.com/2024/10/school-6year-salary-kananda-news-school-issue-kannada-news/
See also  BSNL ಹೆಸರಿನಲ್ಲಿ ನಕಲಿ ಟವರ್ ನಿರ್ಮಾಣ ಸಂದೇಶ, ಉದ್ಯೋಗ ನೇಮಕಾತಿ ಹಾವಳಿ..! ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ ಟೆಲಿಕಾಂ ಸಂಸ್ಥೆ..!
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget