ಮಂಗಳೂರು: ಚಾರ್ಟರ್ಡ್ ಅಕೌಂಟೆಂಟ್ (ಸಿಎ)ಪರೀಕ್ಷೆಯ ಫಲಿತಾಂಶ ಸೋಮವಾರ ಪ್ರಕಟಗೊಂಡಿದ್ದು, ಇದರಲ್ಲಿ ಮಂಗಳೂರಿನ ರುತ್ ಕ್ಲ್ಯಾರ್ ಡಿಸಿಲ್ವ ದೇಶಕ್ಕೆ ಪ್ರಥಮ ಶ್ರೇಣಿ ಪಡೆದುಕೊಂಡು ಇತಿಹಾಸ ನಿರ್ಮಿಸಿದ್ದಾರೆ. ಇನ್ಸಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸಿದ ಪರೀಕ್ಷೆಯಲ್ಲಿ ರುತ್ ಕ್ಲೇರ್ ಡಿ’ಸಿಲ್ವಾ ಜುಲೈನಲ್ಲಿ ನಡೆದ ಸಿಎ ಫೈನಲ್ ಪರೀಕ್ಷೆಗಳಲ್ಲಿ ಅಖಿಲ ಭಾರತ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ರುತ್ ಕ್ಲ್ಯಾರ್ ಡಿಸಿಲ್ವ ಅವರು ರೋಸಿ ಮಾರಿಯಾ ಡಿ’ಸಿಲ್ವಾ ಮತ್ತು ರಫರ್ಟ್ ಡಿ’ಸಿಲ್ವಾ ದಂಪತಿಯ ಪುತ್ರಿಯಾಗಿದ್ದಾರೆ. ಬಲ್ಮಠದಲ್ಲಿ ತನ್ನ ಸಿಎ ಪೂರ್ಣಗೊಳಿಸಿದ್ದಳು. ರೂತ್ ತನ್ನ ಶಾಲಾ ಶಿಕ್ಷಣವನ್ನು ಸೇಂಟ್ ಥೆರೇಸಾ ಶಾಲೆಯಲ್ಲಿ ಮತ್ತು ಪದವಿಪೂರ್ವ ಶಿಕ್ಷಣವನ್ನು ದೂರ ಶಿಕ್ಷಣದ ಮೂಲಕ ಮಂಗಳೂರು ವಿಶ್ವವಿದ್ಯಾನಿಲಯದಿಂದ ಪಡೆದುಕೊಂಡಿದ್ದರು.