ಕ್ರೈಂದೇಶ-ಪ್ರಪಂಚ

ಸಾ.ರಾ.ಮಹೇಶ್ ಪುತ್ರನ ಕಾರಿಗೆ ಕಲ್ಲು ತೂರಾಟ! ಬಿಜೆಪಿ ಕಾರ್ಯಕರ್ತನ ಮೇಲೂ ಹಲ್ಲೆ!

ನ್ಯೂಸ್ ನಾಟೌಟ್ : ರಾಜ್ಯ ವಿಧಾನಸಭೆ ಚುನಾವಣೆ ಗೆ ಎಲ್ಲಾ ಪಕ್ಷದ ಅಭ್ಯರ್ಥಿಗಳು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಈ ವೇಳೆ ಕೆಲವು ಕಡೆಗಳಲ್ಲಿ ಗಲಾಟೆಯೂ ಸೋಮವಾರ ಆಗಿದೆ.

ಮೈಸೂರಿನ ಕೆ.ಆರ್ ನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ ಮಧ್ಯೆ ಗಲಾಟೆ ನಡೆದಿದೆ. ಬೀಚನಹಳ್ಳಿ ಕೊಪ್ಪಲು ಗ್ರಾಮದಲ್ಲಿ ಮತಯಾಚನೆ ವೇಳೆ ಕಾಂಗ್ರೆಸ್- ಜೆಡಿಎಸ್ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಸಾ.ರಾ.ಮಹೇಶ್ ಪುತ್ರ ಸಾರಾ. ಧನುಷ್ ಕಾರಿಗೆ ಕಾಂಗ್ರೆಸ್ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ.

ಚಿತ್ರದುರ್ಗ ದ ಚಳ್ಳಕೆರೆ ಬಿಜೆಪಿ ಮಂಡಲ ಅಧ್ಯಕ್ಷನ ಕಾರಿನ ಮೇಲೆ ಕಲ್ಲೆಸೆತ ಆಗಿದ್ದು ಕಾಂಗ್ರೆಸ್ ವಿರುದ್ಧ ಆರೋಪ ಮಾಡಲಾಗಿದೆ. ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ತುರವನೂರು ಠಾಣೆ ಮುಂದೆ ಬಿಜೆಪಿ ಮುಖಂಡರು ಧರಣಿ ನಡೆಸಿದ್ದಾರೆ.

ಬೆಂಗಳೂರಿನ ಬಿಟಿಎಂ ಲೇಔಟ್‍ನ 1ನೇ ಹಂತದಲ್ಲಿ ಪ್ರಚಾರದ ವೇಳೆ ಬಿಜೆಪಿ ಕಾರ್ಯಕರ್ತನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಬಿಜೆಪಿ ಅಭ್ಯರ್ಥಿ ಶ್ರೀಧರ್ ರೆಡ್ಡಿ ಪರ ಪ್ರಚಾರದ ವೇಳೆ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರು ಮುಖಾಮುಖಿ ಆಗಿದ್ದಾರೆ. ಈ ವೇಳೆ ಗಲಾಟೆ ಆಗಿದೆ ಎನ್ನಲಾಗಿದೆ.

ಈ ವೇಳೆ ಕಾಂಗ್ರೆಸ್ ಬೆಂಬಲಿಗರಿಂದ ಬಿಜೆಪಿ ಕಾರ್ಯಕರ್ತ ಹರಿನಾಥ್ ಎಂಬಾತನ ಮೇಲೆ ಹಲ್ಲೆ ಮಾಡಿದ್ದಾರೆ ಅಂತ ಆರೋಪಿಸಿ ಮಡಿವಾಳ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಸಂಸದ ತೇಜಸ್ವಿ ಸೂರ್ಯ , ಸೋಮವಾರ ರಾತ್ರಿಯೊಳಗೆ ಪೊಲೀಸರು ಕ್ರಮ ಕೈಗೊಂಡಿಲ್ಲ ಅಂದ್ರೆ ಉಗ್ರ ಪ್ರತಿಭಟನೆ ಮಾಡೋದಾಗಿ ಎಚ್ಚರಿಕೆ ಕೊಟ್ಟಿದ್ದಾರೆ.

Related posts

ಬುದ್ಧಿಮಾಂದ್ಯ ಮಗಳ ಮೇಲೆಯೇ ಕಾಮುಕ ತಂದೆಯ ಅಟ್ಟಹಾಸ,ಮಗು ಜನಿಸಿದ ಬಳಿಕ ಬೆಳಕಿಗೆ ಬಂತು ಪ್ರಕರಣ

ದರ್ಶನ್ ಇನ್ನೂ ಕೃಷಿ ಇಲಾಖೆಯ ರಾಯಭಾರಿಯಾಗಿಯೇ ಇರ್ತಾರಾ..? ಸಚಿವ ಎಂ.ಬಿ ಪಾಟೀಲ್ ಈ ಬಗ್ಗೆ ಹೇಳಿದ್ದೇನು..?

ಆಕೆಯನ್ನು ಕೊಲೆಗೈದು ಹೃದಯವನ್ನು ಆಲೂಗಡ್ಡೆಯೊಂದಿಗೆ ಬೇಯಿಸಿ ಅತ್ತೆ ಮಾವನಿಗೆ ಬಡಿಸಿದ..! ಇಲ್ಲಿದೆ ವಿಚಿತ್ರ ಸೈಕೋ ಕಿಲ್ಲರ್ ಸ್ಟೋರಿ!