ಕರಾವಳಿರಾಜಕೀಯವೈರಲ್ ನ್ಯೂಸ್

‘ನಮ್ಮವರು ಪಕ್ಷ ಬಿಡುತ್ತಿರುವುದು ನಿಜ’ ಎಂದದ್ದು ಯಾರಿಗೆ ಸದಾನಂದ ಗೌಡ..? ಸೋಲಿನ ಬಳಿಕ ಪಕ್ಷ ಕಟ್ಟುವಲ್ಲಿ ವಿಫಲರಾದೆವು ಎಂದು ಸೋಲೊಪ್ಪಿಕೊಂಡರಾ ಕೇಂದ್ರದ ಮಾಜಿ ಸಚಿವ?

ನ್ಯೂಸ್ ನಾಟೌಟ್ : ”ಇತ್ತೀಚಿನ ದಿನಗಳಲ್ಲಿ ಕೆಲವು ನಾಯಕರು ಪಕ್ಷ ತೊರೆದು ಕಾಂಗ್ರೆಸ್ ಸೇರುತ್ತಿರುವುದು ನಮ್ಮ ವೈಫಲ್ಯವಾಗಿದೆ. ಸೋಲಿನ ನಂತರ ಪಕ್ಷ ಕಟ್ಟುವಲ್ಲಿ ನಾವು ವಿಫಲವಾಗಿದ್ದೇವೆ. ಅದರಿಂದಾಗಿಯೇ ನಾಯಕರು ಕಾಂಗ್ರೆಸ್ ​ನತ್ತ ಮುಖ ಮಾಡಿದ್ದಾರೆ” ಎಂದು ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದ ಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ

.ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ”ಕಾಂಗ್ರೆಸ್​ಗೆ ಕೆಲವರು ವಲಸೆ ಹೋಗುತ್ತಿದ್ದಾರೆ. ನಮ್ಮವರು ಅನೇಕರು ಬಿಜೆಪಿ ಬಿಟ್ಟು ಹೋಗುತ್ತಿರುವುದು ನಿಜ, ಅವರನ್ನು ಮನವರಿಕೆ ಮಾಡಿ ಪಕ್ಷದಲ್ಲೇ ಉಳಿಸಿಕೊಳ್ಳುವ ಪ್ರಯತ್ನ ನಡೆಯುತ್ತಿಲ್ಲ.

ವಿಧಾನಸಭೆ ಚುನಾವಣೆ ಸೋಲಿನ ನಂತರ ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗಿ ಪಕ್ಷ ಕಟ್ಟಿವಲ್ಲಿ ವಿಫಲವಾಗಿದ್ದೇವೆ” ಎಂದರು.ಕಾವೇರಿ ನದಿಯಿಂದ ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸಿಡಬ್ಲ್ಯೂಆರ್‌ಸಿ ಆದೇಶ ಕುರಿತು ಪ್ರತಿಕ್ರಿಯಿಸಿ, ”ಕರ್ನಾಟಕದಲ್ಲಿ ನೀರಿಲ್ಲ, ಬಿಡಲು ಆಗಲ್ಲ, ಆದರೆ ತಮಿಳುನಾಡಿನಲ್ಲಿ ನೀರಿನ ಅವಶ್ಯಕತೆ ಎಲ್ಲಿದೆ ಅಂತ ಅವರು ಪ್ರತಿಪಾದಿಸುತ್ತಿಲ್ಲ.

ನಮ್ಮವರು ಕುಡಿಯಲು ಅಗತ್ಯವಾಗಿ ಬೇಕು ಅನ್ನೋದನ್ನು ಪರಿಣಾಮಕಾರಿಯಾಗಿ ಮನವರಿಕೆ ಮಾಡಿಕೊಡುವಲ್ಲಿ ವಿಫಲವಾಗಿದ್ದಾರೆ. ಇದು ಸರ್ಕಾರ, ಜಲಸಂಪನ್ಮೂಲ ಖಾತೆ ಸಚಿವರ ವೈಫಲ್ಯ” ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

Related posts

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ನೂತನ ಶಾಸಕ ಅಶೋಕ್ ಕುಮಾರ್ ರೈ, ಅಭಿಮಾನಿಗಳಿಂದ ಭರ್ಜರಿ ಸ್ವಾಗತ

ಕೊಕ್ಕಡದ ಹುಡುಗನಿಗೆ ತಡರಾತ್ರಿ ಕೇಳಿಸಿತು ಗೆಜ್ಜೆ ಸದ್ದು..!

ದೊಡ್ಡಡ್ಕ: ಭೀಕರ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು, ಫಲಿಸದ ಚಿಕಿತ್ಸೆ