ಕ್ರೈಂವೈರಲ್ ನ್ಯೂಸ್ಸಿನಿಮಾ

ಸಲ್ಮಾನ್​ ಖಾನ್ ಮನೆ ಮುಂದೆ ಮುಂಜಾನೆ ಗುಂಡಿನ ದಾಳಿ..! ಬಾಲಿವುಡ್ ನಟನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ಗ್ಯಾಂಗ್‌ ಸ್ಟರ್..!

258

ನ್ಯೂಸ್ ನಾಟೌಟ್: ಬಾಲಿವುಡ್ ನಟ ಸಲ್ಮಾನ್​ ಖಾನ್(Salman Khan) ಮನೆ ಮುಂದೆ ದಿಢೀರ್ ಗುಂಡಿನ ದಾಳಿ ನಡೆದಿದೆ. ಇಂದು (ಎ.14) ಮುಂಜಾನೆ 5ಗಂಟೆಗೆ ಗುಂಡಿನ ದಾಳಿ ಸಂಭವಿಸಿದೆ. ಬಾಂದ್ರಾದಲ್ಲಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಗ್ಯಾಲಕ್ಸಿ ಅಪಾರ್ಟ್ಮೆಂಟ್ ಹೊರಗೆ ನಾಲ್ಕು ಸುತ್ತಿನ ಗುಂಡಿನ ದಾಳಿ ನಡೆಸಲಾಗಿದೆ. ಬೆಳಗಿನ ಜಾವ ಇಬ್ಬರು ಅಪರಿಚಿತರು ಈ ಈ ಗುಂಡಿನ ದಾಳಿ ನಡೆಸಿದ್ದಾರೆ ಎಂದು ವರದಿ ತಿಳಿಸಿದೆ.

ಇಬ್ಬರು ಶೂಟರ್‌ಗಳು ಬೈಕ್‌ನಲ್ಲಿ ಬಂದು ನಾಲ್ಕು ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಸದ್ಯಕ್ಕೆ ಗಾಯಗೊಂಡಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಸಲ್ಮಾನ್ ಖಾನ್ ನಿವಾಸಕ್ಕೆ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ಈ ಗುಂಡಿನ ದಾಳಿಯ ನಂತರ ಮುಂಬೈ ಕ್ರೈಂ ಬ್ರಾಂಚ್ ಜೊತೆಗೆ ಬಾಂದ್ರಾ ಪೊಲೀಸ್ ತಂಡವು ಸ್ಥಳಕ್ಕೆ ತಲುಪಿದೆ. ಅಲ್ಲದೆ ವಿಧಿವಿಜ್ಞಾನ ತಂಡವೂ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದೆ.

ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನ ರಸ್ತೆಯ ಎರಡೂ ಬದಿಗಳಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಡಿಸಿಪಿ ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರು ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದಾಗಿ ಅನೇಕ ಬಾರಿ ಬೆದರಿಕೆ ಹಾಕಿದ್ದರು. ಇತ್ತೀಚೆಗೆ, ಲಾರೆನ್ಸ್ ಬಿಷ್ಣೋಯ್ ಕೆನಡಾದಲ್ಲಿರುವ ನಟ-ಗಾಯಕ ಗಿಪ್ಪಿ ಗ್ರೆವಾಲ್ ಅವರ ನಿವಾಸದ ಮೇಲೂ ದಾಳಿ ನಡೆಸಿದ್ದರು, ಈ ಬಗೆಯ ದಾಳಿ ನಡೆದಿರಬಹುದು ಎಂದು ಶಂಕಿಸಲಾಗಿದೆ.

See also  ಏಜೆಂಟ್‍ ಗಳಿಂದ ಮೋಸ ಹೋಗಿ ರಷ್ಯಾದ ಸೇನೆಯಲ್ಲಿರುವ ಭಾರತೀಯರನ್ನು ಬಿಡುಗಡೆ ಮಾಡುವಂತೆ ಕೇಳಿದ ಮೋದಿ..! ರಷ್ಯಾದ ನಿರ್ಧಾರವೇನು..?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget