ನ್ಯೂಸ್ ನಾಟೌಟ್: ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಬಾಲಿವುಡ್ ಅಂಗಳದಲ್ಲಿ ಹವಾ ಎಬ್ಬಿಸುತ್ತಿದ್ದಾರೆ.ಇದೀಗ ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ನಟನೆಯ ‘ಸಿಕಂದರ್’ (Sikandar) ಸಿನಿಮಾ ರಿಲೀಸ್ ಗೆ ಸಜ್ಜಾಗಿದ್ದು, ಈ ಹಿನ್ನೆಲೆ ಸಲ್ಮಾನ್ ಖಾನ್ ಜೊತೆ ರಶ್ಮಿಕಾ ಮಂದಣ್ಣ ಸ್ಟೈಲೀಶ್ ಆಗಿ ಡ್ಯಾನ್ಸ್ ಮಾಡಿರುವ ಹಾಡಿನ ಟೀಸರ್ ಅನ್ನು ಚಿತ್ರತಂಡ ಇದೀಗ ರಿಲೀಸ್ ಮಾಡಿದೆ.
‘ಪುಷ್ಪ 2’ ಬೆಡಗಿ ‘ಸಿಕಂದರ್ ನಾಚೇ’ ಹಾಡಿನಲ್ಲಿ ಸಲ್ಮಾನ್ ಜೊತೆ ಸೊಂಟ ಬಳುಕಿಸಿದ್ದು, ಹಾಡಿನಲ್ಲಿ ಸಲ್ಮಾನ್ ಮಾಸ್ ಗೆಟಪ್ ನಲ್ಲಿ ಎಂಟ್ರಿ ಕೊಟ್ಟಿದ್ದಾರೆ. ಇತ್ತ ರಶ್ಮಿಕಾ ಸ್ಟೈಲೀಶ್ ಮತ್ತು ಬೋಲ್ಡ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಸಿಕಂದರ್ ನಾಚೇ ಎನ್ನುತ್ತಾ ಇಬ್ಬರೂ ಸಖತ್ ಹಾಟ್ ಆಗಿ ಹೆಜ್ಜೆ ಹಾಕಿದ್ದಾರೆ. ಸದ್ಯ ಹಾಡಿನ ಟೀಸರ್ ರಿಲೀಸ್ ಆಗಿದ್ದು, ಮಾ.18ರಂದು ಫುಲ್ ಸಾಂಗ್ ಅನ್ನು ಚಿತ್ರತಂಡ ಬಿಡುಗಡೆ ಮಾಡಲಿದೆ.
ಸಲ್ಮಾನ್, ರಶ್ಮಿಕಾ ಮಂದಣ್ಣ, ‘ಮಗಧೀರ’ ನಟಿ ಕಾಜಲ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರವನ್ನು ಎ.ಆರ್ ಮುರುಗದಾಸ್ ನಿರ್ದೇಶನ ಮಾಡಿದ್ದಾರೆ. ಸಾಜಿದ್ ನಿರ್ಮಾಣಕ್ಕೆ ಸಾಥ್ ನೀಡಿದ್ದಾರೆ. ಇನ್ನೂ ‘ಸಿಕಂದರ್’ ಚಿತ್ರದ ಟೀಸರ್, ಸಾಂಗ್ಸ್ ಎಲ್ಲವೂ ಫ್ಯಾನ್ಸ್ ಗೆ ಮೆಚ್ಚುಗೆ ಆಗಿದೆ. ಈದ್ ಹಬ್ಬದಂದು ಸಿನಿಮಾ ರಿಲೀಸ್ ಆಗಲಿದೆ.ಇನ್ನೂ ಮೊದಲ ಬಾರಿಗೆ ಸಲ್ಮಾನ್ ಜೊತೆ ರಶ್ಮಿಕಾ ನಟಿಸಿರೋ ಕಾರಣ ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಬೆಟ್ಟದಷ್ಟು ನಿರೀಕ್ಷೆಯಿದೆ.
View this post on Instagram