ಕಲ್ಲುಗುಂಡಿ: ಇಲ್ಲಿನ ಸುಳ್ಯಕೋಡಿ ಸಮೀಪ ಕಾರೊಂದು ಬೈಕ್ ಗೆ ಗುದ್ದಿ ಪರಾರಿಯಾಗಿರುವ ಘಟನೆ ನಡೆದಿದೆ. ಸಂಜೆ ಐದು ಗಂಟೆ ಸುಮಾರಿಗೆ ದುರ್ಘಟನೆ ಸಂಭವಿಸಿದೆ. ಬೈಕ್ ಚಲಾಯಿಸುತ್ತಿದ್ದ ಗುತ್ತಿಗೆ ಗೋಪಾಲ ಎಂಬುವವರು ತೀವ್ರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಅವರನ್ನು ಸದ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೇ ವೇಳೆ ಪರಾರಿಯಾದ ಕಾರನ್ನು ಸುಳ್ಯದಲ್ಲಿ ಹಿಡಿಯಲಾಗಿದೆ ಎಂದು ಹೇಳಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.