ಸಂಪಾಜೆ : ಇಲ್ಲಿನ ಗಡಿಕಲ್ಲು ಎಂಬಲ್ಲಿ ಮಸೀದಿ ಸಮೀಪ ಕಾರ್ ಮತ್ತು ಬೈಕ್ ಡಿಕ್ಕಿಯಾಗಿದೆ. ಘಟನೆಯಲ್ಲಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ. ರೋಹಿತ್ ಎಂಬ ವ್ಯಕ್ತಿ ಕಾರು ಚಲಾಯಿಸಿಕೊಂಡು ಬರುತ್ತಿದ್ದ ಸಂದರ್ಭದಲ್ಲಿ ಬೈಕ್ ಸವಾರನಿಗೆ ಗುದ್ದಿದ್ದಾರೆ ಎನ್ನಲಾಗಿದೆ. ಬೈಕ್ ಸವಾರನ ಕಾಲಿಗೆ, ತಲೆ ಭಾಗಕ್ಕೆ ಗಂಭೀರ ಪೆಟ್ಟು ಬಿದ್ದಿದೆ.. ಗಾಯಾಳುವನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲು ಕರೆದುಕೊಂಡು ಹೋಗಲಾಗಿದೆ ಎಂದು ತಿಳಿದು ಬಂದಿದೆ.