ಅರಂತೋಡು: ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಸಂಪಾಜೆ ದ.ಕ ಇದರ 2020-2021 ಸಾಲಿನ ವಾರ್ಷಿಕ ಮಹಾಸಭೆಯ ಪ್ರಯುಕ್ತ ಸಂಘದ ಸದಸ್ಯರ ಮಕ್ಕಳಿಗೆ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಯಲ್ಲಿ ಶೇಕಡ 85 ಕ್ಕಿಂತ ಹೆಚ್ಚು ಅಂಕ ಗಳಿಸಿರುವ ತಲಾ ಹತ್ತು ವಿದ್ಯಾರ್ಥಿಗಳಿಗೆ ಸಂಘದ ವತಿಯಿಂದ ಪ್ರೋತ್ಸಾಹಧನ ನೀಡಲಾಗುತ್ತಿದೆ. ಅರ್ಹ ವಿದ್ಯಾರ್ಥಿಗಳು ಆಗಸ್ಟ್ 31ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಸಂಘದ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.