ಕರಾವಳಿ

ಸಂಪಾಜೆ ಗ್ರಾಮ ಪಂಚಾಯತ್ ಗೆ ಪ್ರತಿಷ್ಠಿತ ಗಾಂಧಿ ಗ್ರಾಮ ಪುರಸ್ಕಾರ, ಗಾಂಧಿ ಜಯಂತಿಯಂದು ಮುಖ್ಯಮಂತ್ರಿಯಿಂದ ಹಸ್ತಾಂತರ

955

ಕಲ್ಲುಗುಂಡಿ: ಜಿ.ಕೆ.ಹಮೀದ್ ನೇತೃತ್ವದ ಸಂಪಾಜೆ ಗ್ರಾಮ ಪಂಚಾಯತ್ ಗೆ ಎರಡನೇ ಬಾರಿಗೆ ಜಿಲ್ಲಾ ಮಟ್ಟದ ಪ್ರತಿಷ್ಠಿತ ಗಾಂಧಿ ಪುರಸ್ಕಾರಕ್ಕೆ ಆಯ್ಕೆಯಾಗಿದೆ. 2020-21 ನೇ ಸಾಲಿನಲ್ಲಿ ಜಿಲ್ಲಾ ಪಂಚಾಯತ್ ಅಧಿಕಾರಿಗಳು ಗಾಂಧಿ ಗ್ರಾಮ ಪುರಸ್ಕಾರಕ್ಕೆ ನಡೆಸಿದ ಸಮೀಕ್ಷೆ ಆಧಾರದಲ್ಲಿ ಪುರಸ್ಕಾರವನ್ನು ನೀಡಲಾಗುತ್ತಿದೆ. ಪ್ರಶಸ್ತಿಯು ಗ್ರಾಮಕ್ಕೆ 5 ಲಕ್ಷ ರೂ. ಅನುದಾನ ಹಾಗೂ ಸ್ಮರಣಿಕೆ ಒಳಗೊಂಡಿದೆ. ಅಕ್ಟೋಬರ್‌ 2 ಗಾಂಧಿ ಜಯಂತಿಯಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಪ್ರಶಸ್ತಿಯನ್ನು ನೀಡಲಿದ್ದಾರೆ.

ಉಳಿದಂತೆ ಮಂಗಳೂರಿನಿಂದ ಕಿಲ್ಪಾಡಿ ಗ್ರಾಮ ಪಂಚಾಯತ್, ಮೂಡಬಿದ್ರೆನಿಂದ ಬೆಳುವಾಯಿ ಗ್ರಾಮ ಪಂಚಾಯತ್, ಬಂಟ್ವಾಳದಿಂದ ಇರ್ವತ್ತೂರು ಗ್ರಾಮ ಪಂಚಾಯತ್, ಪುತ್ತೂರಿನಿಂದ ಆರ್ಯಾಪು ಗ್ರಾಮ ಪಂಚಾಯತ್, ಕಡಬದಿಂದ ನೊಜಿ ಬಾಳ್ತಿಲ ಗ್ರಾಮ ಪಂಚಾಯತ್ ಹಾಗೂ ಬೆಳ್ತಂಗಡಿಯಿಂದ ಮಡಂತ್ಯಾರು ಗ್ರಾಮ ಪಂಚಾಯತ್ ಪ್ರಶಸ್ತಿಗೆ ಆಯ್ಕೆಯಾಗಿವೆ.

ತಾಲೂಕಿನಲ್ಲಿಯೇ ನಂ 1 ಗ್ರಾಮ ಸಂಪಾಜೆ

ತಾಲೂಕಿನಲ್ಲಿಯೇ ಸಂಪಾಜೆ ಗ್ರಾಮ ನಂ 1 ಎನಿಸಿಕೊಂಡಿದೆ. ಈ ಬಗ್ಗೆ ಗ್ರಾಮ ಪಂಚಾಯತ್ ಅಧ್ಯಕ್ಷ ಜಿ.ಕೆ. ಹಮೀದ್ ಅವರು ನ್ಯೂಸ್ ನಾಟೌಟ್ ತಂಡದೊಂದಿಗೆ ಸಂತಸವನ್ನು ಹಂಚಿಕೊಂಡಿದ್ದಾರೆ. ಸ್ವಚ್ಛತೆ, ನೀರಿನ ಪೂರೈಕೆ, ಗ್ರಾಮದ ಸಮಸ್ಯೆಗಳ ನಿವಾರಣೆ, ತುರ್ತು ಸ್ಪಂದನೆ ಸೇರಿದಂತೆ ಹಲವು ವಿಚಾರದ ಆಧಾರದಲ್ಲಿ ಅಧಿಕಾರಿಗಳು ಇಲ್ಲಿಗೆ ಬಂದು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅವರು ನೀಡಿರುವ ಅಂಕದ ಆಧಾರದಲ್ಲಿ ನಮಗೆ ಪ್ರಶಸ್ತಿ ನೀಡಲಾಗುತ್ತಿದೆ. ನಮಗೆ ಸಹಕಾರ ನೀಡಿದ ಎಲ್ಲ ಅಧಿಕಾರಿ ವರ್ಗ ಹಾಗೂ ಆಡಳಿತ ಸಿಬ್ಬಂದಿಗೆ ನಾನು ಈ ಮೂಲಕ ಧನ್ಯವಾದಗಳನ್ನು ತಿಳಿಸುತ್ತೇನೆ. ಅಲ್ಲದೆ ಸಮಸ್ತ ಊರಿನ ನಾಗರಿಕರಿಗೂ ನಮಗೆ ನೀಡುತ್ತಿರುವ ಪ್ರೋತ್ಸಾಹ, ಸಹಕಾರದಿಂದ ಇಂತಹದೊಂದು ಸಾಧನೆ ಮಾಡಲು ಸಾಧ್ಯವಾಗಿದೆ. ಅವರೆಲ್ಲರಿಗೂ ಚಿರಋಣಿಯಾಗಿದ್ದೇನೆ ಎಂದು ಜಿ.ಕೆ.ಹಮೀದ್ ತಿಳಿಸಿದ್ದಾರೆ.

ಸ್ವಚ್ಛತೆ, ಸಮರ್ಪಕ ನೀರಿನ ಪೂರೈಕೆ, ಗ್ರಾಮದ ಸಮಸ್ಯೆಗಳ ನಿವಾರಣೆ, ತುರ್ತು ಸ್ಪಂದನೆ ಸೇರಿದಂತೆ ಹಲವು ವಿಚಾರದ ಆಧಾರದಲ್ಲಿ ಅಧಿಕಾರಿಗಳು ಇಲ್ಲಿಗೆ ಬಂದು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅವರು ನೀಡಿರುವ ಅಂಕದ ಆಧಾರದಲ್ಲಿ ನಮಗೆ ಪ್ರಶಸ್ತಿ ನೀಡಲಾಗುತ್ತಿದೆ. ನಮಗೆ ಸಹಕಾರ ನೀಡಿದ ಎಲ್ಲ ಅಧಿಕಾರಿ ವರ್ಗ ಹಾಗೂ ಆಡಳಿತ ಸಿಬ್ಬಂದಿಗೆ ನಾನು ಈ ಮೂಲಕ ಧನ್ಯವಾದಗಳನ್ನು ತಿಳಿಸುತ್ತೇನೆ. ಅಲ್ಲದೆ ಸಮಸ್ತ ಊರಿನ ನಾಗರಿಕರಿಗೂ ನಮಗೆ ನೀಡುತ್ತಿರುವ ಪ್ರೋತ್ಸಾಹ, ಸಹಕಾರದಿಂದ ಇಂತಹದೊಂದು ಸಾಧನೆ ಮಾಡಲು ಸಾಧ್ಯವಾಗಿದೆ.

ಜಿ.ಕೆ.ಹಮೀದ್, ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ

See also  ಅರಂತೋಡು:47ನೇ ನ್ಯಾಶನಲ್ ಅಥ್ಲೆಟಿಕ್ ಚಾಂಪಿಯನ್ ಶಿಪ್‌ನಲ್ಲಿ ರಮ್ಯ ಪವನ್ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
  Ad Widget   Ad Widget   Ad Widget   Ad Widget   Ad Widget   Ad Widget   Ad Widget