ಸುಳ್ಯ

ಸಂಪಾಜೆ: ಅನಾರೋಗ್ಯದಿಂದ ಬಳಲುತ್ತಿದ್ದ ಕೈಪಡ್ಕದ ಹರಿಶ್ಚಂದ್ರ ನಿಧನ

ನ್ಯೂಸ್ ನಾಟೌಟ್: ಬಹು ದಿನಗಳಿಂದ ಅನಾರೋಗ್ಯದಿಂದ ನರಳುತ್ತಿದ್ದ ಸಂಪಾಜೆಯ ಹರಿಶ್ಚಂದ್ರ ರೈ ಬುಧವಾರ ಸಂಜೆ ನಿಧನರಾಗಿದ್ದಾರೆ.

ಸುಳ್ಯ ತಾಲೂಕಿನ ಸಂಪಾಜೆಯ ಕೈಪಡ್ಕದ ನಿವಾಸಿ ಮೋನಪ್ಪ ರೈ ಹಾಗೂ ಸರಸ್ವತಿ ದಂಪತಿಯ ಹಿರಿಯ ಪುತ್ರರಾಗಿದ್ದಾರೆ. ಕಳೆದ ಕೆಲವು ತಿಂಗಳಿನಿಂದ ತೀವ್ರ ಅನಾರೋಗ್ಯಕ್ಕೀಡಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಸಂಪಾಜೆಯ ನಿವಾಸದಲ್ಲಿ ಚೇತರಿಸಿಕೊಳ್ಳುತ್ತಿದ್ದರು. ಆದರೆ ಒಂದು ವಾರದಿಂದ ಅವರ ಆರೋಗ್ಯದಲ್ಲಿ ವಿಪರೀತ ಏರುಪೇರು ಸಂಭವಿಸಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ಪತ್ನಿ ಶಾಂತಾ ಮಕ್ಕಳಾದ ದಿವ್ಯಶ್ರೀ, ದೀಕ್ಷಿತ್ , ದೀಪಕ್ ರೈ, ತಂದೆ ಮೋನಪ್ಪ ರೈ, ತಾಯಿ ಸರಸ್ವತಿ, ಸಹೋದರ ಪ್ರಭಾಕರ, ಸಹೋದರಿ ಶೀಲಾವತಿ ರೈ ಸೇರಿದಂತೆ ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಮಿಂಚಿದ ಕ್ಷಮಾ, ಸುಳ್ಯ ರೋಟರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಏಷ್ಯನ್ ಗೇಮ್ಸ್ ಗೆ ಆಯ್ಕೆ

ಮನೆಗೆ ನುಗ್ಗಿ ಲಕ್ಷಾಂತರ ರೂ.ಮೌಲ್ಯದ ಚಿನ್ನಾಭರಣ ಕಳವು

ಮಡಿಕೇರಿ:ಕಾಡಾನೆ ದಾಳಿಗೊಳಗಾಗಿ ಗಂಭೀರ ಗಾಯಗೊಂಡಿದ್ದ ತೋಟದ ಕಾರ್ಮಿಕ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತ್ಯು