Latestಕೊಡಗುಶಿಕ್ಷಣ

ಸಂಪಾಜೆ: ಸುಂದರ ಭಾರತ ಟ್ರಸ್ಟ್ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಣಾ ಕಾರ್ಯಕ್ರಮ, ಟ್ರಸ್ಟ್ ನ ಪದಾಧಿಕಾರಿಗಳನ್ನು ಮತ್ತು ವಿದ್ಯಾರ್ಥಿಗಳನ್ನು ಅಭಿನಂದಿಸಿದ ಶಿಕ್ಷಕರು

1.4k

ನ್ಯೂಸ್ ನಾಟೌಟ್: ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಪುಸ್ತಕಗಳು ಅತ್ಯವಶ್ಯಕ ಎಂದು ಸರ್ಕಾರಿ ಪ್ರೌಢಶಾಲೆ ಸಂಪಾಜೆಯ ಮುಖ್ಯ ಶಿಕ್ಷಕಿ ಜಯಶ್ರೀ ತಿಳಿಸಿದರು.

ಇಂದು(ಜೂ.20) ಸುಂದರ ಭಾರತ ಟ್ರಸ್ಟ್ ಜೆ.ಪಿ ನಗರ ಬೆಂಗಳೂರು ಇವರ ವತಿಯಿಂದ ಕೊಡಮಾಡುವ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಣಾ ಕಾರ್ಯಕ್ರಮ ನಡೆಯಿತು.
ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ R.M.S.A ಪ್ರೌಢಶಾಲೆ ಸಂಪಾಜೆಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮುಖ್ಯ ಶಿಕ್ಷಕಿ ಜಯಶ್ರೀ, ಸುಂದರ ಭಾರತ ಟ್ರಸ್ಟ್ ನ ಎಲ್ಲಾ ಪದಾಧಿಕಾರಿಗಳಿಗೆ ಮತ್ತು ವಿದ್ಯಾರ್ಥಿಗಳಿಗೆ ಅಭಿನಂದಿಸಿ ಶುಭ ಹಾರೈಸಿದರು.

ಪುಸ್ತಕಗಳ ಮಹತ್ವ ಮತ್ತು ಟ್ರಸ್ಟ್ ನ ಕಾರ್ಯ ಚಟುವಟಿಕೆಗಳ ಕುರಿತಾಗಿ ಪ್ರೌಢಶಾಲಾ ವಿಭಾಗದ ದೈಹಿಕ ಶಿಕ್ಷಕಿ ಸುಜಯ ಮಾಹಿತಿ ನೀಡಿದರು. ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಎಸ್.ಡಿ.ಎಂ.ಸಿ ಯ ಪದಾಧಿಕಾರಿಗಳು, ಶಾಲೆಯ ಶಿಕ್ಷಕರು ಭಾಗವಹಿಸಿದ್ದರು.
ಪ್ರಾಥಮಿಕ ಶಾಲಾ ವಿಭಾಗದ ಮುಖ್ಯ ಗುರುಗಳಾದ ಚಂದ್ರಾವತಿ ವಂದಿಸಿ, ಸುಂದರ ಭಾರತ ಟ್ರಸ್ಟ್ ಅನ್ನು ಅಭಿನಂದಿಸಿದರು.

 

See also  ಬಡ ಮಹಿಳೆಗೆ 30 ತಿಂಗಳಲ್ಲಿ 25 ಬಾರಿ ಹೆರಿಗೆ !! ಅಮಾಯಕರಿಗೆ ವಂಚಿಸಿ ಸರ್ಕಾರಿ ಯೋಜನೆ ದುರುಪಯೋಗ
  Ad Widget     Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget