ಸಂಪಾಜೆ (ಕೊಡಗು): ಇಲ್ಲಿನ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಕೆ ಗೋಪಾಲಕೃಷ್ಣ ಭಟ್ ನಿಧನರಾಗಿದ್ದಾರೆ. ಅವರಿಗೆ 65 ವರ್ಷವಾಗಿತ್ತು. ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಇದೇ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಗಣೇಶ ಚತುರ್ಥಿಗೂ ಮೊದಲು ಚೇತರಿಸಿಕೊಂಡು ವಾಪಸ್ ದೇವಸ್ಥಾನದ ದೈನಂದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಆದರೆ ಇಂದು ವಾಪಸ್ ಅವರು ಅನಾರೋಗ್ಯಕ್ಕೆ ತುತ್ತಾಗಿ ನಿಧನರಾಗಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ.