ಕ್ರೈಂದೇಶ-ವಿದೇಶಬೆಂಗಳೂರುರಾಜಕೀಯವೈರಲ್ ನ್ಯೂಸ್

`ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆ’ ಎಂದಿದ್ದ ಉದಯನಿಧಿಗೆ ಇಂದು(ಜೂ.25) ಬೆಂಗಳೂರು ಕೋರ್ಟ್‌ ನಲ್ಲಿ ವಿಚಾರಣೆ..! ಖುದ್ದಾಗಿ ವಿಚಾರಣೆಗೆ ಹಾಜರಾಗುವಂತೆ ಉದಯನಿದಿಗೆ ಸೂಚನೆ ನೀಡಿದ್ದ ಕೋರ್ಟ್‌..!

266

ನ್ಯೂಸ್‌ ನಾಟೌಟ್‌: ಸನಾತನ ಧರ್ಮಡೆಂಗ್ಯೂ, ಮಲೇರಿಯಾ ಇದ್ದಂತೆ ಅಂತ ವಿವಾದಾತ್ಮಕ ಹೇಳಿಕೆ ನೀಡಿದ್ದ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್‌ (Udhayanidhi Stalin) ಇಂದು(ಜೂ.25) ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಹಾಜರಾಗುವ ಸಾಧ್ಯತೆಗಳಿವೆ ಎಂದು ವರದಿ ತಿಳಿಸಿದೆ.

ಸನಾತನ ಧರ್ಮದ ವಿರುದ್ಧ ಅವಹೇಳನಕಾರಿ ಹೇಳಿಕೆ ಹಿನ್ನೆಲೆಯಲ್ಲಿ 5 ತಿಂಗಳ ಹಿಂದೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್‌ ನೀಡಿತ್ತು. ಖುದ್ದಾಗಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಕಳೆದ ಮಾರ್ಚ್ 4 ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ ನೀಡಿತ್ತು.

ಆದ್ರೆ ಕಾರಣಾಂತರದಿಂದ ಗೈರಾಗಿದ್ದ ಉದಯನಿಧಿ ಸ್ಟಾಲಿನ್‌ ಅವರಿಂದು ಬೆಳಗ್ಗೆ 10:30ರ ವೇಳೆಗೆ ಬೆಂಗಳೂರಿನ 42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಎದುರು ಹಾಜರಾಗಲಿದ್ದಾರೆ ಎನ್ನಲಾಗಿದೆ. ಬೆಂಗಳೂರಿನ ಪರಮೇಶ್ ಎಂಬುವವರು ಉದಯನಿಧಿ ಹೇಳಿಕೆ ವಿರುದ್ಧ ಖಾಸಗಿ ದೂರು ಸಲ್ಲಿಸಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ್ದ 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರಾದ ಜೆ. ಪ್ರೀತ್ ಅವರಿದ್ದ ಪೀಠ 5 ತಿಂಗಳ ಹಿಂದೆ ಸಮನ್ಸ್‌ ಜಾರಿಗೊಳಿಸಿತ್ತು.

See also  ಕೊಡಗು: ಬ್ಯಾಂಕ್ ವ್ಯವಸ್ಥಾಪಕ ಬ್ಯಾಂಕ್‌ ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ..! ಪತ್ನಿಯೂ ಬ್ಯಾಂಕ್ ವ್ಯವಸ್ಥಾಪಕಿ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget