Latestಕ್ರೈಂ

ಅಕ್ರಮ ಮರಳು ಅಡ್ಡೆ ಮೇಲೆ ದಾಳಿ ಮಾಡಿದ ಅಧಿಕಾರಿಗಳ ಮೇಲೆ ಹಲ್ಲೆ..! ಅಧಿಕಾರಿ ಆಸ್ಪತ್ರೆಗೆ ದಾಖಲು..!

930

ನ್ಯೂಸ್‌ ನಾಟೌಟ್ : ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಅಡ್ಡೆ ಮೇಲೆ ಗಣಿ ಮತ್ತು ಭೂ ವಿಜ್ಞಾನಿ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ ವೇಳೆ ಅಧಿಕಾರಿಗಳ ಮೇಲೆಯೇ ದಂಧೆ ಕೋರರು ಹಲ್ಲೆ ಮಾಡಿದ ಘಟನೆ ಕೊಪ್ಪಳ ತಾಲೂಕಿನ ಚಿಕ್ಕ ಸಿಂದೋಗಿ ಸಮೀಪ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.

ಹಲ್ಲೆಗೊಳಗಾದ ಸಿಬ್ಬಂದಿಯನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಸಿಬ್ಬಂದಿ ಸಚಿನ್ ಗೌರಿಪುರ ಎಂದು ತಿಳಿದು ಬಂದಿದೆ. ಈ ಸಿಬ್ಬಂದಿ ಸೇರಿದಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮೂವರು ಅಧಿಕಾರಿಗಳು ಶುಕ್ರವಾರ ಮಧ್ಯಾಹ್ನ ಚಿಕ್ಕ ಸಿಂದೋಗಿ ಸಮೀಪದ ಹಿರೇಹಳ್ಳದಲ್ಲಿ ನಡೆಯುತ್ತಿದ್ದ ಅಕ್ರಮಣ ಮರಳು ಗಾಣಿಗಾರಿಕೆಯ ಸ್ಥಳಕ್ಕೆ ತೆರಳಿ ಅಕ್ರಮ ಗಣಿಗಾರಿಕೆ ತಡೆಯುವ ಯತ್ನ ನಡೆಸಿದ್ದರು. ಈ ವೇಳೆ ಸ್ಥಳದಲ್ಲಿದ್ದ ಎಂಟು ಜನರ ತಂಡವು ಇಲಾಖೆಯ ಸಿಬ್ಬಂದಿಯ ಮೇಲೆ ದಾಳಿ ಮಾಡಿದ್ದಾರೆ.

ಟ್ಯಾಕ್ಟರ್ ನಲ್ಲಿ ಮರಳು ಸಾಗಿಸುತ್ತಿದ್ದ ಚಾಲಕನನ್ನು ತಡೆದ ಇಲಾಖೆ ಸಿಬ್ಬಂದಿ ಮರಳು ತುಂಬಿದ ಟ್ರಾಕ್ಟರ್ ಅನ್ಲೋಡ್ ಮಾಡಲು ಹೇಳಿದಾಗ ಸ್ಥಳದಲ್ಲಿ ಮರಳು ತುಂಬುತ್ತಿದ್ದ ಎಂಟು ಜನರು ಏಕಾಏಕಿ ಇಲಾಖೆಯ ಚಾಲಕ ಸಚಿನ್ ಗೌರಿಪುರ ಎನ್ನುವ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ. ಇದರಿಂದ ತೀವ್ರ ಅಸ್ವಸ್ಥಗೊಂಡ ಸಿಬ್ಬಂದಿ ಸಚಿನ್ ನನ್ನು ನಗರದ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಕೊಪ್ಪಳ ತಾಲೂಕಿನ ವ್ಯಾಪ್ತಿಯಲ್ಲಿ ಮಿತಿಮೀರಿದ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿದ್ದು ಇದಕ್ಕೆ ಪ್ರಭಾವಿಗಳ ಬೆಂಬಲವಿದೆ ಎನ್ನುವಂತ ಮಾತು ಜೋರಾಗಿದೆ. ಇಲಾಖೆ ಸಿಬ್ಬಂದಿ ಮೇಲೆ ಹಲ್ಲೆಯಾದ ಹಿನ್ನೆಲೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿ ರಶೀದ್ ಅವರು ತಾಲೂಕಿನ ಅಳವಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

See also  ಮನೆಯ ಬೆಡ್ ರೂಂಗೆ ನುಗ್ಗಿ 5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿದ್ದ ಕಳ್ಳ ಬಜಪೆ ಪೊಲೀಸರ ಬಲೆಗೆ..! ಸಿಕ್ಕಿಬಿದ್ದವನಿಂದ ಪೊಲೀಸರು ವಶಪಡಿಸಿಕೊಂಡಿದ್ದೆಷ್ಟು..?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget