Latestಕ್ರೈಂರಾಜ್ಯವೈರಲ್ ನ್ಯೂಸ್ಸಿನಿಮಾ

ಹಿರಿಯ ಹಾಸ್ಯ ನಟ ಬ್ಯಾಂಕ್ ಜನಾರ್ಧನ್ ವಿಧಿವಶ..! 500 ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದ ಕಲಾವಿದ

1.3k

ನ್ಯೂಸ್ ನಾಟೌಟ್: 500 ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ಜನರನ್ನು ನಕ್ಕು-ನಲಿಸಿದ ಹಾಸ್ಯ ನಟ ಬ್ಯಾಂಕ್‌ ಜನಾರ್ಧನ್‌ (76) ನಿಧನರಾಗಿದ್ದಾರೆ. ಮಧ್ಯರಾತ್ರಿ 2.30ರ ಸುಮಾರಿಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಟ ಬ್ಯಾಂಕ್‌ ಜನಾರ್ಧನ್‌ ಕೊನೆಯುಸಿರೆಳೆದಿದ್ದಾರೆ.

ಸುಲ್ತಾನ್‌ ಪಾಳ್ಯದ ನಿವಾಸದಲ್ಲಿರುವ ಅವರ ನಿವಾಸದಲ್ಲಿ ಪಾರ್ಥೀವ ಶರೀರ ಇಡಲಾಗಿದ್ದು, ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 3 – 4 ಗಂಟೆ ವೇಳೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಕೆಲ ತಿಂಗಳ ಹಿಂದಷ್ಟೇ ಬ್ಯಾಂಕ್ ಜನಾರ್ಧನ ಅವರಿಗೆ ಹೃದಯಾಘಾತವಾಗಿತ್ತು. ಕಳೆದ 40 ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದರು. ಕನ್ನಡ ಸಿನಿಮಾ, ಕಿರುತೆರೆ ಮತ್ತು ರಂಗಭೂಮಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು ಜನಾರ್ದನ್. ಹಾಸ್ಯ ನಟರಾಗಿ ಸಾಕಷ್ಟು ಪಾತ್ರಗಳನ್ನು ನಿರ್ವಹಿಸಿದ್ದಾರೆ.

ಕನ್ನಡ ಸಿನಿಮಾಗಳಲ್ಲಿ ಹಾಸ್ಯ ನಟರಾಗಿ ಜನಾರ್ದನ್ ಮಿಂಚಿದ್ರು. 80, 90ರ ದಶಕದ ಬಹುಬೇಡಿಕೆ ಹೊಂದಿದ್ದ ಹಾಸ್ಯನಟರಲ್ಲಿ ಒಬ್ಬರು.

See also  ನಾನು ಐಶಾರಾಮಿ ಹೋಟೆಲ್‌ ಹೊರಗೆ ಭಿಕ್ಷುಕಿಯಾಗಿ ನಿಂತಿದ್ದೆ ಎಂದದ್ದೇಕೆ ಈ ಖ್ಯಾತ ನಟಿ..! ನಿನ್ನೆಯಿಂದ ಏನನ್ನೂ ತಿಂದಿಲ್ಲ ಎಂದದ್ದಕ್ಕೆ ಬಿಸ್ಕೆಟ್‌ ಕೊಟ್ಟರು..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget