ನ್ಯೂಸ್ ನಾಟೌಟ್ : ಸರಿಗಮ ವಿಜಯ್ (Sarigama Vijay) ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಇವರು ಕನ್ನಡ ಚಿತ್ರರಂಗದ ಹಿರಿಯ ನಟ ಆಗಿದ್ದು,ಕಳೆದ 4 ದಿನಗಳಿಂದ ಯಶವಂತಪುರದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

ನಟ ಸರಿಗಮ ವಿಜಯ್ ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಯಿತು.ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟನ ಆರೋಗ್ಯ ಸ್ಥಿತಿ ಇಂದು ಗಂಭೀರವಾಗಿದ್ದು ಸರಿಗಮ ವಿಜಯ್ ಪುತ್ರ ರೋಹಿತ್ ಮಾಹಿತಿ ಹಂಚಿಕೊಂಡಿದ್ದಾರೆ.
ಸರಿಗಮ ವಿಜಯ್ 1980ರಲ್ಲಿ ಗೀತಪ್ರಿಯಾ ನಿರ್ದೇಶನದ ‘ಬೆಳವಳದ ಮಡಿಲಲ್ಲಿ’ ಚಿತ್ರದಲ್ಲಿ ನಟಿಸುವುದರ ಮೂಲಕ ನಟನಾಗಿ ಗುರುತಿಸಿಕೊಂಡು ಚಿತ್ರರಂಗದಲ್ಲಿ ತೊಡಗಿಕೊಂಡರು. 269 ಚಿತ್ರಗಳಲ್ಲಿ ನಟನೆ, 80 ಚಿತ್ರಗಳಿಗೆ ಸಹಾಯಕ ನಿರ್ದೇಶನ ಮಾಡಿದ್ದಾರೆ. 2,400 ಧಾರಾವಾಹಿಗಳ ನಿರ್ದೇಶನದ ಜೊತೆಗೆ ನಟನೆ ಮಾಡಿದ್ದಾರೆ. ವಿಶೇಷ ಅಂದರೆ, ಇವರ ನಟನೆಯ ಚಿತ್ರಗಳ ಪಟ್ಟಿಯಲ್ಲಿ ಟೈಗರ್ ಪ್ರಭಾಕರ್ ಚಿತ್ರಗಳೇ ಹೆಚ್ಚಾಗಿದೆ. ಇನ್ನೂ ಅವರು ಸರಿಗಮ ವಿಜಿ ಎಂದೇ ಫೇಮಸ್ ಆಗಿದ್ದಾರೆ.