ಕ್ರೈಂ

ಅಪರಿಚಿತ ವಾಹನ ಡಿಕ್ಕಿ: ಸಂಪಾಜೆಯ ಸರೋಜ್ ಕುಮಾರ್ ಇನ್ನಿಲ್ಲ

442

ಮಂಗಳೂರು: ಸಂಪಾಜೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಕಿಂಗ್ ಹೋಗುತ್ತಿದ್ದ ವ್ಯಕ್ತಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಮಂಗಳೂರಿನ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ.

ಇಂದು ಬೆಳಗ್ಗೆ ವಾಕಿಂಗ್ ಹೋಗುತ್ತಿದ್ದ ಸಂದರ್ಭದಲ್ಲಿ ಸಂಪಾಜೆಯ ಹಳೆ ಸೇತುವೆ ಬಳಿ ಸರೋಜ್ ಕುಮಾರ್ (55) ಅವರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿತ್ತು. ಡಿಕ್ಕಿ ಹೊಡೆದ ವಾಹನ ಸ್ಥಳದಿಂದ ಪರಾರಿಯಾಗಿತ್ತು. ಗಂಭೀರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ನ್ಯೂಸ್ ನಾಟೌಟ್ ಗೆ ಅವರ ಪುತ್ರ ಖಚಿತಪಡಿಸಿದ್ದಾರೆ.

See also  ಆಟವಾಡುತ್ತಾ ಕಾರಿನೊಳಗೆ ಹೋದ 4 ಮಕ್ಕಳು ಹೊರಬರಲಾರದೆ ಸಾವು..! ಕಾರಿನ ಮಾಲೀಕನಿಗಾಗಿ ಹುಡುಕಾಟ..!
  Ad Widget   Ad Widget   Ad Widget   Ad Widget