ಕರಾವಳಿಪುತ್ತೂರು

ಸವಣೂರು: ಕೆರೆಯ ಪಾಚಿ ತೆಗೆಯಲು ಹೋದ ಯುವಕ ಈಜು ಬಾರದೆ ಮೃತ್ಯು!

ತೋಟದ ಕೆರೆಯಲ್ಲಿದ್ದ ಪಾಚಿ ತೆಗೆಯಲು ಹೋದ ಯುವಕ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಗುರುವಾರ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ತಾಡಿ ಗ್ರಾಮದಿಂದ ವರದಿಯಾಗಿದೆ.

ಮೃತಪಟ್ಟ ಯುವಕನನ್ನು ಪಾಲ್ತಾಡಿ ಗ್ರಾಮದ ಕಾಪುತಮೂಲೆ ನಿವಾಸಿ ಮೋನಪ್ಪ ನಾಯ್ಕ ಎಂಬವರ ಪುತ್ರ ಗೋಪಾಲಕೃಷ್ಣ ಕೆ ಎಂದು ಗುರುತಿಸಲಾಗಿದೆ. ಗೋಪಾಲಕೃಷ್ಣ ಅವರು ಪಾಲ್ತಾಡಿ ಗ್ರಾಮದ ಕಾಪುತಮೂಲೆ ಎಂಬಲ್ಲಿರುವ ತೋಟದ ಕೆರೆಯಲ್ಲಿರುವ ಪಾಚಿ ತೆಗೆಯಲು ಒಬ್ಬನೇ ತೆರಳಿದವನು ವಾಪಾಸು ಬಾರದೇ ಇದ್ದುದರಿಂದ ಮನೆಯವರು ಕೆರೆಯ ಬಳಿ ಹೋಗಿ ನೋಡಿದಾಗ ಗೋಪಾಲಕೃಷ್ಣನ ಚಪ್ಪಲಿ ಕೆರೆಯ ನೀರಿನಲ್ಲಿ ತೇಲುತ್ತಿದ್ದುದರಿಂದ ಸಂಶಯಗೊಂಡು ಮರದ ದೋಂಟಿಯೊಂದನ್ನು ಕೆರೆಯ ನೀರಿಗೆ ಹಾಕಿ ನೋಡಿದಾಗ ಗೋಪಾಲಕೃಷ್ಣನ ಅಂಗಿ ದೋಂಟಿಯ ಕೊಕ್ಕೆ ಸಿಕ್ಕಿಕೊಂಡಿದೆ ಎನ್ನಲಾಗಿದೆ.

ದೂರುದಾರ ಮೃತರ ತಂದೆ ಮೋನಪ್ಪ ನಾಯ್ಕ ಅವರು ಕೂಡಲೇ ಅಣ್ಣ ಶೇಷಪ್ಪ ನಾಯ್ಕ ಮತ್ತು ಅವರ ಮಗ ಸುಬ್ರಾಯ ನಾಯ್ಕರವರನ್ನು ಕರೆದು ಗೋಪಾಲಕೃಷ್ಣನ ದೇಹವನ್ನು ಮೇಲಕ್ಕೆತ್ತಿ ಆಟೋ ರಿಕ್ಷಾದಲ್ಲಿ ಕೆಯ್ಯೂರುವರೆಗೆ ತೆಗೆದುಕೊಂಡು ಬಂದು ಅಲ್ಲಿಂದ ಅಂಬ್ಯುಲೆನ್ಸ್ ವಾಹನವೊಂದರಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆತಂದಿದ್ದಾರೆ.

ಅಲ್ಲಿನ ವೈದ್ಯರು ಪರೀಕ್ಷಿಸಿ ಗೋಪಾಲಕೃಷ್ಣನು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Related posts

ಪುತ್ತಿಲ ಮನವಿಗೆ ಮಿಡಿದ ಪುತ್ತೂರಿನ ಜನತೆ

ಮೂಡುಬಿದಿರೆ: ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಉಮೇದುವಾರಿಕೆ ಸಲ್ಲಿಕೆ

ಕಲ್ಲುಗುಂಡಿ: ಎಸ್‌ಕೆಎಸ್‌ಎಸ್‌ಎಫ್‌ ಯುವಕರ ಶ್ರಮದಾನ