ನ್ಯೂಸ್ ನಾಟೌಟ್ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಕೆಲಸ ಮಾಡಲು ಬಯಸುವ ಅಭ್ಯರ್ಥಿಗಳು SBI ನ ಅಧಿಕೃತ ವೆಬ್‌ಸೈಟ್ sbi.co.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 2025 ರಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 269 ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ನಡೆಸುತ್ತಿದ್ದು, ಆಸಕ್ತರು ಮತ್ತು ಅರ್ಹ ಅಭ್ಯರ್ಥಿಗಳು ಈ ಕೂಡಲೇ ಎಸ್ ಬಿಐ ವೆಬ್‌ಸೈಟ್ sbi.co.in ನಲ್ಲಿ ಅರ್ಜಿ ಸಲ್ಲಿಸಬಹುದು.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ FLC (ಎಫ್ಎಲ್ಸಿ) ಕೌನ್ಸಿಲರ್ ಮತ್ತು FLC ನಿರ್ದೇಶಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪ್ರಕ್ರಿಯೆ ಆರಂಭವಾಗಿದೆ. ಅರ್ಜಿ ಸಲ್ಲಿಸಲು ಇನ್ನೂ 18 ದಿನಗಳು ಬಾಕಿ ಇದ್ದು, ಅಂದರೆ ಮಾರ್ಚ್ 21 ರವರೆಗೂ ಅರ್ಜಿ ಸಲ್ಲಿಸಲು ಅವಕಾಶ ಇದೆ. ಮಾರ್ಚ್ 21, 2025 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
SBIನಲ್ಲಿ ಉದ್ಯೋಗ ಪಡೆಯಲು ಗರಿಷ್ಠ ವಯೋಮಿತಿ 65 ವರ್ಷಗಳು ಎಂದು ತಿಳಿಸಲಾಗಿದೆ. SBI ನಲ್ಲಿ ಆಯ್ಕೆಯ ನಂತರದ ವೇತನ ಬಗ್ಗೆ ವಿವರಣೆ ನೀಡಿದ್ದು, ಕ್ಲೆರಿಕಲ್: ರೂ 30,000, JMGS-I: ರೂ 40,000, MMGS-II: ರೂ 45,000, MMGS-III: ರೂ 45,000, SMGS-IV: ರೂ 50,000 ಎಂದು ತಿಳಿಸಲಾಗಿದೆ.
ಸಂಪೂರ್ಣ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ: CRPD ADVT _RS_34_2024-25_FLC DIRECTOR AND COUNSELLOR
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳನ್ನು ನೇರವಾಗಿ ಸಂದರ್ಶನಕ್ಕೆ ಆಹ್ವಾನಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಕೆಲಸ ಮಾಡಲು ಬಯಸುವ ಅಭ್ಯರ್ಥಿಗಳು SBI ನ ಅಧಿಕೃತ ವೆಬ್‌ಸೈಟ್ sbi.co.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.