ದೇಶ-ವಿದೇಶರಾಜ್ಯವೈರಲ್ ನ್ಯೂಸ್

ನಾಳೆ (ಆಗಸ್ಟ್ 21) ಭಾರತ್ ಬಂದ್..? ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್ ನಾಟೌಟ್: ಎಸ್‌ಸಿ/ಎಸ್‌ಟಿ ಮೀಸಲಾತಿ ಕುರಿತು ಸುಪ್ರೀಂ ಕೋರ್ಟ್ ನ ತೀರ್ಪಿನ ವಿರುದ್ಧ ಪ್ರತಿಭಟನೆಯ ಸಂಕೇತವಾಗಿ ರಿಸರ್ವೇಶನ್ ಬಚಾವೋ ಸಂಘರ್ಷ್ ಸಮಿತಿಯು ಆಗಸ್ಟ್ 21 ರಂದು ಅಂದರೆ ನಾಳೆ ಭಾರತ್ ಬಂದ್​​​ಗೆ (Bharat Bandh) ಕರೆ ನೀಡಿದೆ. ರಾಜಸ್ಥಾನದ ಎಸ್‌ಸಿ/ಎಸ್‌ಟಿ ಗುಂಪುಗಳು ಬಂದ್‌ಗೆ ಬೆಂಬಲ ವ್ಯಕ್ತಪಡಿಸಿವೆ. ಕರ್ನಾಟಕದಲ್ಲಿ ಈ ಬಂದ್ ಪರಿಣಾಮ ಬೀರಲಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಸುಪ್ರೀಂಕೋರ್ಟ್‌ನ ತೀರ್ಪು ಎಸ್‌ಸಿ ಮತ್ತು ಎಸ್‌ಟಿ ಗುಂಪುಗಳೊಳಗೆ ಉಪ-ವರ್ಗಗಳನ್ನು ರಚಿಸಲು ರಾಜ್ಯಗಳಿಗೆ ಅವಕಾಶ ಮಾಡಿಕೊಟ್ಟಿದ್ದು,”ನಿಜವಾಗಿಯೂ ಅಗತ್ಯವಿರುವವರಿಗೆ ಮೀಸಲಾತಿಯಲ್ಲಿ ಆದ್ಯತೆ ನೀಡಬೇಕು” ಎಂದು ಹೇಳಿದೆ. ಈ ನಿರ್ಧಾರವು ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ಮೀಸಲಾತಿ ಕುರಿತ ಸುಪ್ರೀಂಕೋರ್ಟ್ ತೀರ್ಪನ್ನು ಪ್ರಶ್ನಿಸುವುದು ಮತ್ತು ಅದನ್ನು ಹಿಂಪಡೆಯುವಂತೆ ಒತ್ತಾಯಿಸುವುದು ಭಾರತ್ ಬಂದ್‌ ನ ಮುಖ್ಯ ಉದ್ದೇಶವಾಗಿದೆ ಎಂದು ವರದಿಗಳು ತಿಳಿಸಿವೆ.

ಬಂದ್ ವೇಳೆ ಹಿಂಸಾಚಾರದ ಸಾಧ್ಯತೆಯ ಹಿನ್ನೆಲೆಯಲ್ಲಿ ಉನ್ನತ ಪೊಲೀಸ್ ಅಧಿಕಾರಿಗಳು ವಿಡಿಯೊ ಕಾನ್ಫರೆನ್ಸ್ ಮೂಲಕ ಸಿದ್ಧತೆಗಾಗಿ ಸಭೆ ನಡೆಸಿದ್ದಾರೆ. ಎಲ್ಲಾ ವಿಭಾಗೀಯ ಆಯುಕ್ತರು, ಜಿಲ್ಲಾಧಿಕಾರಿಗಳು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು ಎಂದು ವರದಿಗಳು ತಿಳಿಸಿವೆ.
ಪಶ್ಚಿಮ ಉತ್ತರ ಪ್ರದೇಶವನ್ನು ವಿಶೇಷವಾಗಿ ಸೂಕ್ಷ್ಮವೆಂದು ಪರಿಗಣಿಸಲಾಗಿದೆ. ಈ ಕಾರಣದಿಂದಾಗಿ ಇಲ್ಲಿ ಪೊಲೀಸರು ಹೆಚ್ಚಿನ ನಿಗಾ ವಹಿಸಿದ್ದಾರೆ. ಪ್ರತಿಭಟನೆಯ ಸಂದರ್ಭದಲ್ಲಿ ಸಾರ್ವಜನಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳು ವ್ಯಾಪಕ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಆಂಬ್ಯುಲೆನ್ಸ್‌ಗಳಂತಹ ತುರ್ತು ಸೇವೆಗಳು ಕಾರ್ಯನಿರ್ವಹಿಸಲಿವೆ.

Click

https://newsnotout.com/2024/08/11-year-after-husband-wife-issue-viral-video-women-interview/
https://newsnotout.com/2024/08/puttur-wild-wild-boar-animal-kannada-news-scooter-driver/
https://newsnotout.com/2024/08/bengaluru-lady-case-under-twist-kannada-news-fir/
https://newsnotout.com/2024/08/duplicate-currency-note-kannada-news-youtube-puttur-mangaluru/
https://newsnotout.com/2024/08/mangaluru-kannada-news-students-gang-of-students-issue-police-case-foot-ball/

Related posts

“CM ಸಿದ್ದರಾಮಯ್ಯ ಈ ತಪ್ಪು ಮಾಡಿದ್ರೆ ದೇವರೇ ನೋಡಿಕೊಳ್ತಾರೆ” ಕೋಡಿಮಠದ ಸ್ವಾಮೀಜಿ ಹೇಳಿದ್ರು ಮತ್ತೊಂದು ಭವಿಷ್ಯ..!

ದರ್ಶನ್ ಪ್ರಕರಣ: ಪಟ್ಟಣಗೆರೆ ಶೆಡ್ ಮಾಲಿಕ ಉಲ್ಟಾ ಹೊಡೆದದ್ದೇಕೆ..? ಇಲ್ಲಿದೆ ಸಂಪೂರ್ಣ ಮಾಹಿತಿ

ಆ್ಯಪ್‌ ಮೂಲಕ ಬುಕ್‌ ಮಾಡಿ ಆ ಕ್ಯಾಬ್‌ನ್ನೇ ಕದ್ದ ಕ‍ಳ್ಳರು! ಇಲ್ಲಿದೆ ಖತರ್ನಾಕ್ ಕಳ್ಳರ ಸ್ಟೋರಿ!