ಕೃಷಿ ಸಂಪತ್ತುಶಿಕ್ಷಣ

ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

ನ್ಯೂಸ್ ನಾಟೌಟ್: ಕೃಷಿ ಇಲಾಖೆಯಿಂದ ರೈತ ಕುಟುಂಬಗಳ ಮಕ್ಕಳಿಗೆ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಯಡಿ ನೀಡಲಾಗುತ್ತಿರುವ ಶಿಷ್ಯ ವೇತನವನ್ನು ಇದೀಗ ಭೂರಹಿತ ಕೃಷಿ ಕಾರ್ಮಿಕರ ಮಕ್ಕಳಿಗೂ ವಿಸ್ತರಣೆ ಮಾಡಲಾಗಿದೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ. ಅರ್ಹ ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಂಟಿಕೃಷಿ ನಿರ್ದೇಶಕರು ಮನವಿ ಮಾಡಿದ್ದಾರೆ.

ರಾಜ್ಯದ ಎಲ್ಲಾ ರೈತ ಕುಟುಂಬದ ಮಕ್ಕಳಿಗೆ ಮುಖ್ಯಮಂತ್ರಿ ರೈತ ವಿದ್ಯಾ ನಿಧಿ ಕಾರ್ಯಕ್ರಮದಡಿ ಕೃಷಿ ಇಲಾಖೆಯಿಂದ 2500 ರೂ. ಗಳಿಂದ 11000 ರೂ. ಗಳವರೆಗೆ ವಾರ್ಷಿಕ ಶಿಷ್ಯವೇತನವನ್ನು ಅರ್ಹ ಮಕ್ಕಳ ಬ್ಯಾಂಕ್‍ಗಳ ಖಾತೆಗಳಿಗೆ ನೇರ ನಗದು ವರ್ಗಾವಣೆ (ಡಿಬಿಟಿ) ಪದ್ದತಿಯಲ್ಲಿ ಜಮೆ ಮಾಡಲಾಗುತ್ತಿದೆ. ಆದರೆ ಆ ಯೋಜನೆಯ ಅರ್ಹ ಅಭ್ಯರ್ಥಿಗಳ ಪಟ್ಟಿಯಲ್ಲಿ ಅರ್ಹತೆಗಳನ್ನು ವಿಸ್ತರಣೆ ಮಾಡಲಾಗಿದ್ದು ಮುಖ್ಯಮಂತ್ರಿ ರೈತ ವಿದ್ಯಾ ನಿಧಿ ಯೋಜನೆಯನ್ನು ಭೂರಹಿತ ಕೃಷಿ ಕಾರ್ಮಿಕರ ಮಕ್ಕಳಿಗೂ ವಿಸ್ತರಣೆ ಮಾಡಲಾಗಿದೆ.

ಭೂರಹಿತ ಕೃಷಿ ಕಾರ್ಮಿಕರ ಮಕ್ಕಳು ರೈತ ವಿದ್ಯಾ ನಿಧಿ ವಿದ್ಯಾರ್ಥಿ ವೇತನ ಪಡೆಯಲು ಭೂರಹಿತ ಕೃಷಿ ಕಾರ್ಮಿಕ (FID without land) ಎಂದು ದೃಢೀಕರಿಸಿದ ಎಫ್.ಡಿ.ಐ ನಂಬರನ್ನು ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ, ಈ ನಂಬರ್ ಮೂಲಕ ಭೂಮಿ ಇಲ್ಲದಂತಹ ಕೃಷಿ ಕಾರ್ಮಿಕರ ಮಕ್ಕಳು ರೈತ ವಿದ್ಯಾನಿಧಿ ಯೋಜನೆ ಅಡಿ ವಿದ್ಯಾರ್ಥಿ ವೇತನವನ್ನು ಪಡೆಯಬಹುದು. ಆದರೆ, ಈ ಯೋಜನೆಯು ಪುನರಾವರ್ತಿತ ವಿದ್ಯಾರ್ಥಿಗಳಿಗೆ ಅನ್ವಯಿಸುವುದಿಲ್ಲ.

ಸಂಬಂಧಪಟ್ಟ ಪ್ರೌಢಶಾಲಾ ವಿದ್ಯಾರ್ಥಿಗಳು, ಪದವಿ ಪೂರ್ವ, ಡಿಪ್ಲೋಮಾ, ಪದವಿ, ಇತ್ಯಾದಿ ವೃತ್ತಿಪರ ಕೋರ್ಸ್‍ಗಳು ಮತ್ತು ಎಲ್ಲಾ ಮಾದರಿಯ ಸ್ನಾತಕೋತ್ತರ ಕೋರ್ಸ್‍ಗಳ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನಲ್ಲಿ ಸ್ಟೂಡೆಂಟ್ಸ್ ಸ್ಕಾಲರ್‌ಶಿಪ್ ಪೋರ್ಟಲ್ ಜಾಲತಾಣದಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು.

ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳು https://ssp.karnataka.gov.in/ssp2223/homeNew.aspx ಹಾಗೂ ಮೆಟ್ರಿಕ್ ನಂತರದ ಎಲ್ಲ ವಿದ್ಯಾರ್ಥಿಗಳು https://ssp.postmatric.karnataka.gov.in/homepage.aspx ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಸುಳ್ಯ: ಎನ್ಎಂಸಿ ಪದವಿ ಕೋರ್ಸ್ 2024-25ನೇ ಶೈಕ್ಷಣಿಕ ಸಾಲಿನ ಪ್ರವೇಶಾತಿ ಆರಂಭ, ಆಸಕ್ತರು ಕೂಡಲೇ ಸಂಪರ್ಕಿಸಿ

ನರ್ಸರಿಯಿಂದ 8ನೇ ತರಗತಿವರೆಗಿನ ಶಾಲೆಗಳಿಗೆ 5 ದಿನ ರಜೆ – ಶಿಕ್ಷಣಾಧಿಕಾರಿ ಆದೇಶ! ಯಾವ ಯಾವ ಜಿಲ್ಲೆಗಳಲ್ಲಿ ರಜೆ..? ಇಲ್ಲಿದೆ ಸಂಪೂರ್ಣ ಮಾಹಿತಿ

ಮುಷ್ಕರ ವಾಪಾಸ್‌ ಪಡೆದ ಸರ್ಕಾರಿ ನೌಕರರು