ಉಡುಪಿ

ಶಾಲಾ ವಾಹನ ಮತ್ತು ಬೈಕ್‌ ನಡುವೆ ಅಪಘಾತ, ಸವಾರ ಸ್ಥಳದಲ್ಲೇ ಸಾವು

ನ್ಯೂಸ್‌ ನಾಟೌಟ್‌: ಕಾರ್ಕಳದ ಮಿಯಾರು-ಜೋಡುಕಟ್ಟೆ ಬಳಿ ಶನಿವಾರ (ನ.23ರ) ಬೆಳಗ್ಗೆ ಖಾಸಗಿ ಶಾಲಾ ವಾಹನ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಮೃತರನ್ನು ಸ್ಥಳೀಯ ‌ನಿವಾಸಿ ಅಜಿತ್ ಕುಮಾರ್ ಎಂದು ಗುರುತಿಸಲಾಗಿದೆ. ಬಸ್ ಮಧ್ಯಭಾಗಕ್ಕೆ ಬೈಕ್ ಡಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಸವಾರನ ತಲೆಗೆ ತೀವ್ರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತ ಸಂದರ್ಭ ಶಾಲೆಯ ಬಸ್ ನಲ್ಲಿ ವಿದ್ಯಾರ್ಥಿಗಳು ಇರಲಿಲ್ಲ.‌ ಖಾಲಿ ಬಸ್ ಎನ್ನಲಾಗಿದೆ‌. ಕಾರ್ಕಳ ನಗರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, ಇಂದಿನಿಂದ(ಎ.21) 2 ದಿನ ವ್ಯಾಪಕ ಮಳೆ ಸಾಧ್ಯತೆ

ನನ್ನ ಪ್ರಕಾರ ಹಾಲಿನ ದರ ಇನ್ನೂ ಜಾಸ್ತಿ ಮಾಡಬೇಕಿತ್ತು ಎಂದ ಡಿಕೆಶಿ..! ಇದಕ್ಕೆ ಯಾರು ಬೇಕಾದ್ರು ವಿವಾದ ಮಾಡಲಿ, ಯಾರು ಬೇಕಾದ್ರು ಬೈಯಲಿ ಎಂದ ಡಿಸಿಎಂ ಡಿ.ಕೆ ಶಿವಕುಮಾರ್..!

ಉಡುಪಿ: ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ..! 600ಕ್ಕೂ ಅಧಿಕ ಮಕ್ಕಳನ್ನು ಮೈದಾನದಲ್ಲಿ ನಿಲ್ಲಿಸಿ ಶಾಲೆಯ ತಪಾಸಣೆ..!