ಕ್ರೈಂ

ನ್ಯಾಯವಾದಿಯ ಪುತ್ರಿ ಆತ್ಮಹತ್ಯೆಗೆ ಶರಣು, 7 ನೇ ತರಗತಿ ಬಾಲಕಿಯ ದುರಂತ ಅಂತ್ಯ

340
Spread the love

ನವದೆಹಲಿ: ನ್ಯಾಯವಾದಿ ಗುತ್ತಿಗಾರಿನ ಪೂಜಾರಿಕೋಡಿ ಹರೀಶ್ ರವರ ಪುತ್ರಿ ನಿಹಾರಿಕಾ ( 13 ವರ್ಷ) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.

ಸುಬ್ರಹ್ಮಣ್ಯದ ಕುಮಾರಸ್ವಾಮಿ ಶಾಲೆಯ ವಿದ್ಯಾರ್ಥಿನಿಯಾಗಿದ್ದ ಈಕೆ ಈ ಬಾರಿ ನವೋದಯ ಶಾಲೆಗೆ ಏಳನೇ ತರಗತಿಗೆ ಆಯ್ಕೆಯಾಗಿದ್ದಳು. ಕರೋನಾ ಕಾರಣದಿಂದಾಗಿ ಶಾಲೆ ಆರಂಭಗೊಳ್ಳದೆ, ಮನೆಯಲ್ಲಿಯೇ ನವೋದಯದ ಆನ್‌ಲೈನ್‌ ತರಗತಿ ನಡೆಯುತ್ತಿತ್ತು. ಇನ್ನು ಒಂದೆರಡು ದಿನಗಳಲ್ಲಿ ನವೋದಯ ಶಾಲೆ ಪುನರಾರಂಭಗೊಳ್ಳಲಿತ್ತೆನ್ನಲಾಗಿದೆ. ಇಂದು ಬೆಳಿಗ್ಗೆ ಹರೀಶ್ ಪೂಜಾರಿಕೋಡಿಯವರು ಮನೆಯಿಂದ ಹೊರಟು ಸುಳ್ಯದ ಕಡೆಗೆ ಬಂದ ಸ್ವಲ್ಪ ಹೊತ್ತಲ್ಲೇ ಬಾಲಕಿ ನೇಣು ಬಿಗಿದು ಆತ್ಮಹತ್ಯೆ  ಮಾಡಿಕೊಂಡಳೆನ್ನಲಾಗಿದೆ. ಮನೆಯಲ್ಲಿದ್ದವರಿಗೆ ವಿಷಯ ಗೊತ್ತಾಗಿ ತಕ್ಷಣ ಹೋಗಿ ಹಗ್ಗದಿಂದ ಕೆಳಗಿಳಿಸಿ, ಗುತ್ತಿಗಾರಿಗೆ ಆಸ್ಪತ್ರೆಗೆ ಕರೆತಂದರು. ಅಲ್ಲಿಂದ ವೈದ್ಯರ ಸಲಹೆ ಮೇರೆಗೆ ಸುಳ್ಯ ಸರಕಾರಿ ಆಸ್ಪತ್ರೆಗೆ ತರಲಾಯಿತು. ಇಲ್ಲಿ ಬಂದು ತಲುಪಿದಾಗ ಆಕೆ ಕೊನೆಯುಸಿರೆಳೆದಿರುವುದಾಗಿ ವೈದ್ಯರು ಹೇಳಿದರು. ಸಾವಿಗೆ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ.

See also  ರಾಸಲೀಲೆ ಮಹಾಪಂಡಿತ ಕಾಮುಕ ಡಾಕ್ಟರ್‌ ಅಂದರ್
  Ad Widget   Ad Widget   Ad Widget   Ad Widget   Ad Widget   Ad Widget