ನ್ಯೂಸ್ ನಾಟೌಟ್: ಶಾಲೆಯ ಮೇಲ್ಛಾವಣಿ ಪದರ ಕುಸಿದು ಐವರು ವಿದ್ಯಾರ್ಥಿಗಳು ಹಾಗೂ ಓರ್ವ ಶಿಕ್ಷಕರು ಗಾಯಗೊಂಡ ಘಟನೆ ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ಚಿಲಝೆರಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ದುರಂತ ನಡೆದಿದೆ. 6ನೇ ತರಗತಿ ಕೊಠಡಿ ಮೇಲ್ಛಾವಣಿ ಕಾಂಕ್ರೀಟ್ ಪದರ ಏಕಾಏಕಿ ಕುಸಿದು ಬಿದ್ದಿದೆ. ಘಟನೆಯಲ್ಲಿ ಎಮ್.ಡಿ ಒಂಟಿ ಎಂಬ ಶಿಕ್ಷಕರ ತಲೆಗೆ ಗಂಭೀರ ಗಾಯಗಳಾಗಿವೆ. ಮಕ್ಕಳ ತಲೆ, ಕೈ, ಕಾಲು, ಮುಖಕ್ಕೆ ಗಾಯಗಳಾಗಿವೆ. ಗಾಯಾಳು ಮಕ್ಕಳು ಹಾಗೂ ಶಿಕ್ಷಕರನ್ನು ಕೂಡಲೇ ಗಜೇಂದ್ರಗಡ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಸ್ಥಳಕ್ಕೆ ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಿಥಿಲಗೊಂಡ ಹಳೆಯ ಕೊಠಡಿಯಲ್ಲಿ ಮಕ್ಕಳು ಶಿಕ್ಷಣ ಪಡೆಯುವ ಅನಿವಾರ್ಯತೆ ಎದುರಾಗಿತ್ತು. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು, ಜನ ಪ್ರತಿನಿಧಿಗಳ ಗಮನಕ್ಕೆ ತರಲಾಗಿದೆ. ಆದರೂ ಪ್ರಯೋಜನವಾಗಿಲ್ಲ ಎಂದು ಶಿಕ್ಷಣ ಇಲಾಖೆ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ಘಟನೆ ಸಂಬಂಧ ಗದಗ ಜಿಲ್ಲೆಯ ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಲಿಸುವ ರೈಲಿನ ಕೆಳಗೆ ಬಿದ್ದ ಮಗಳನ್ನು ಪ್ರಾಣ ಲೆಕ್ಕಿಸದೆ ರೈಲ್ವೆ ಹಳಿಯಲ್ಲೇ ಮಲಗಿ ರಕ್ಷಿಸಿದ ತಂದೆ..! ವಿಡಿಯೋ ವೈರಲ್