ನ್ಯೂಸ್ ನಾಟೌಟ್: ದ.ಕ ಜಿಲ್ಲೆಯ ಸುಳ್ಯದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸರಕಾರಿ ಪ್ರೌಢಶಾಲೆ(RMSA) ಕಲ್ಲುಗುಂಡಿ ಸಂಪಾಜೆ ಇಲ್ಲಿ ೨೦೨೩-೨೪ ಸಾಲಿನ ದಾಖಲಾತಿ ಆರಂಭಗೊಂಡಿದೆ. ಈಗಾಗಲೇ ಒಂದನೇ ತರಗತಿಯಿಂದ ಹತ್ತನೇ ತರಗತಿಯವರೆಗೆ ಶಾಲಾ ದಾಖಲಾತಿ ಪ್ರಾರಂಭಗೊಂಡಿದ್ದು, ಈ ಕೂಡಲೇ ನಿಮ್ಮ ಮಕ್ಕಳನ್ನು ಗುಣಮಟ್ಟದ ಉಚಿತ ಶಿಕ್ಷಣವನ್ನು ಒದಗಿಸುವ ಹಾಗೂ ಸಮೀಪದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಸೇರಿಸಬಹುದು ಎಂದು ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ ವೃಂದ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಸಂಪಾಜೆ ಹಾಗೂ ಅಧ್ಯಕ್ಷರು ಮತ್ತು ಸದಸ್ಯರು ಎಸ್ .ಡಿ.ಎಂ.ಸಿ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಸಂಪಾಜೆ ತಿಳಿಸಿದ್ದಾರೆ. ‘ನಿಮ್ಮ ಮಗುವನ್ನು ಹತ್ತಿರದ ಸರಕಾರಿ ಶಾಲೆಗೆ ಸೇರಿಸಿ, ಗುಣಮಟ್ಟದ ಉಚಿತ ಶಿಕ್ಷಣವನ್ನು ಒದಗಿಸಿ’ ಪ್ರೋತ್ಸಾಹಿಸಬೇಕೆಂದು ಪೋಷಕರಲ್ಲಿ ಕೇಳಿಕೊಂಡಿದ್ದಾರೆ.