ನ್ಯೂಸ್ ನಾಟೌಟ್: ಪ್ರತಿಷ್ಠಿತ ಶಾಲೆಯೊಂದರ 35 ಮಂದಿ 12ನೇ ತರಗತಿ ವಿದ್ಯಾರ್ಥಿಗಳು ಬೀಳ್ಕೊಡುಗೆ ಸಮಾರಂಭಕ್ಕೆ ಸೂರತ್ ನ ದಂಡಿ ರಸ್ತೆಯಲ್ಲಿ ಐಷಾರಾಮಿ ಕಾರುಗಳಲ್ಲಿ ಸ್ಟಂಟ್ ಪ್ರದರ್ಶಿಸುತ್ತಾ, ಪಟಾಕಿಗಳನ್ನು ಸಿಡಿಸುತ್ತಾ ತೆರಳಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ಬೆನ್ನಲ್ಲೇ ವಿದ್ಯಾರ್ಥಿಗಳು ಹಾಗೂ ಪೋಷಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಪೊಲೀಸರು ಮುಂದಾಗಿದ್ದಾರೆ.
ಐಷಾರಾಮಿ ಪೋಷಾಕುಗಳನ್ನು ಧರಿಸಿ, ವಿಲಾಸಿ ಕಾರುಗಳಲ್ಲಿ ಬೀಳ್ಕೊಡುಗೆ ಸಮಾರಂಭಕ್ಕೆ ತೆರಳುವ ಮೂಲಕ ಸಂಸ್ಥೆಯಲ್ಲಿ ತಮ್ಮ ಕೊನೆಯ ದಿನವನ್ನು ಕಳೆಯಲು ವಿದ್ಯಾರ್ಥಿಗಳು ತೆರಳುತ್ತಿದ್ದರು. ಡ್ರೋಣ್ ಮತ್ತು ಕ್ಯಾಮೆರಾಗಳನ್ನು ಬಳಸಿ ಇದರ ವಿಡಿಯೊ ಚಿತ್ರೀಕರಿಸಿದ್ದರು. ವಿಡಿಯೋ ವಿರುದ್ಧ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಅಪಾಯಕಾರಿ ಸ್ಟಂಟ್ ಗಳನ್ನು ರಸ್ತೆಯಲ್ಲಿ ಪ್ರದರ್ಶಿಸಿದರೂ, ಕ್ರಮ ಕೈಗೊಳ್ಳದ ಪೊಲೀಸರ ಕ್ರಮವನ್ನು ನಾಗರಿಕರು ಪ್ರಶ್ನಿಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಯಪ್ರವೃತ್ತರಾಗಿದ್ದಾರೆ.