ಕ್ರೈಂವಿಡಿಯೋವೈರಲ್ ನ್ಯೂಸ್

ಶಾಲಾ ವಿದ್ಯಾರ್ಥಿಗಳಿಗೆ ನೀಡಿದ ಸಾಂಬಾರ್‌ನಲ್ಲಿ ಸತ್ತ ಇಲಿ ಪತ್ತೆ..! ಇಲ್ಲಿದೆ ವೈರಲ್ ವಿಡಿಯೋ

159

ನ್ಯೂಸ್ ನಾಟೌಟ್ : ವಿದ್ಯಾರ್ಥಿಗಳಿಗೆ ನೀಡಲಾದ ಸಸ್ಯಹಾರಿ ಸಾಂಬರ್‌ನಲ್ಲಿ ಸತ್ತ ಇಲಿ ಕಾಣಿಸಿಕೊಂಡಿದೆ. ಆ ವಿಡಿಯೋ ಇದೀಗ ಸೋಷಿಯಲ್‌ ಮಿಡಿಯಾದಲ್ಲಿ ಸಖತ್‌ ವೈರಲ್‌ ಆಗಿದೆ ಮತ್ತು ಈ ಘಟನೆ ಉತ್ತರ ಪ್ರದೇಶದ ಹಾಪುರ್‌ನಲ್ಲಿರುವ ರಾಮ ವೈದ್ಯಕೀಯ ಕಾಲೀಜಿನ ಹಾಸ್ಟೆಲ್‌ನಲ್ಲಿ ನಡೆದಿದೆ.

ವೈರಲ್‌ ಆಗಿರುವ ವಿಡಿಯೋದಲ್ಲಿ ಕಾಣಿಸಿರುವಂತೆ ಸಾಂಬಾರ್‌ನಲ್ಲಿ ಸತ್ತ ಇಲಿ ಇದ್ದು, ಇದನ್ನು ನೋಡಿದ ನೆಟ್ಟಿಗರು ಗರಂ ಆಗಿದ್ದಾರೆ. ಇನ್ನು ಈ ಘಟನೆಯ ವಿಡಿಯೊವೊಂದನ್ನು ಪತ್ರಕರ್ತರೊಬ್ಬರು ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋಗೆ ಸಾಕಷ್ಟು ಕಾಮೆಂಟ್‌ಗಳು ಬಂದಿದ್ದು, ಇದೆಲ್ಲಾ ಬೇಜವಾಬ್ದಾರಿತನ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಈ ಬಗ್ಗೆ ವಿಡಿಯೋ ಹಂಚಿಕೊಂಡ ಪತ್ರಕರ್ತರು ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳ ಗಮನ ಸೆಳೆದಿದ್ದಾರೆ.

See also  ವಿದ್ಯಾರ್ಥಿನಿಯರ ಶರ್ಟ್​ ಬಿಚ್ಚಿಸಿ ಕೇವಲ ಬ್ಲೇಜರ್​ನಲ್ಲಿ ಮನೆಗೆ ಕಳುಹಿಸಿದ ಪ್ರಾಂಶುಪಾಲರು..! ಪ್ರತಿಭಟಿಸಿದ ಪೋಷಕರು..!
  Ad Widget   Ad Widget     Ad Widget   Ad Widget   Ad Widget   Ad Widget