ಕರಾವಳಿಬೆಂಗಳೂರುವೈರಲ್ ನ್ಯೂಸ್ಶಿಕ್ಷಣ

ಶಾಲೆಗಳ ಸಮಯ ಬದಲಾವಣೆಯಾಗುತ್ತಾ..? ಈ ಬಗ್ಗೆ ಹೈಕೋರ್ಟ್ ಹೇಳಿದ್ದೇನು? ಈ ನಿರ್ಧಾರಕ್ಕೆ ಕಾರಣವೇನು?

ನ್ಯೂಸ್ ನಾಟೌಟ್ : ಬೆಂಗಳೂರಿನಲ್ಲಿ ಉಂಟಾಗುತ್ತಿರುವ ಟ್ರಾಫಿಕ್ ಸಮಸ್ಯೆ ನಿವಾರಿಸುವ ಉದ್ದೇಶದಿಂದ ಶಾಲೆ, ಕೈಗಾರಿಕೆ, ವಾಣಿಜ್ಯ ಮತ್ತು ಕಂಪೆನಿಗಳ ಕೆಲಸದ ಅವಧಿ ಬದಲಾವಣೆ ಮಾಡುವ ಬಗ್ಗೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

ಶಾಲೆಗಳ ಸಮಯ ಬದಲಾವಣೆಯ ಬಗ್ಗೆ ಸಂಬಂಧಪಟ್ಟವರೊಂದಿಗೆ ಚರ್ಚಿಸಿ ಸಮಗ್ರವಾದ ವರದಿ ಸಲ್ಲಿಸಲು ಸರಕಾರಕ್ಕೆ ಹೈಕೋರ್ಟ್ ಮತ್ತೆ ಎಂಟು ವಾರಗಳ ಕಾಲಾವಕಾಶ ನೀಡಿದೆ.

ಕೆಂಪೇಗೌಡ ಅಂತರ್‍ರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸಂಪರ್ಕಿಸುವ ಬಳ್ಳಾರಿ ರಸ್ತೆಯಲ್ಲಿ ಸಂಚಾರ ದಟ್ಟಣೆ ತಪ್ಪಿಸಲು ಬಸವೇಶ್ವರ ವೃತ್ತದಿಂದ ಹೆಬ್ಬಾಳದ ಎಸ್ಟೀಮ್ ಮಾಲ್ ವರೆಗೆ ರಸ್ತೆ ಅಗಲೀಕರಣ ಮಾಡಲು ಸರಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಮರ್ಪಣ ಸಾಂಸ್ಕೃತಿಕ ಮತ್ತು ಸಾಮಾಜಿಕ ಸಂಘಟನೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ ಸರಕಾರಕ್ಕೆ ಕಾಲಾವಕಾಶ ನೀಡಿದೆ.

ಅರ್ಜಿಯನ್ನು ಸೆ.12 ವಿಚಾರಣೆ ನಡೆಸಿದ್ದ ನ್ಯಾಯಾಲಯ, ಬೆಂಗಳೂರು ನಗರದಲ್ಲಿ ನಿತ್ಯ ಉಂಟಾಗುತ್ತಿರುವ ಸಂಚಾರದ ದಟ್ಟಣೆ ಸಮಸ್ಯೆ ನಿವಾರಿಸಬೇಕಿದೆ. ಈ ನಿಟ್ಟಿನಲ್ಲಿ ಶಾಲೆಗಳ ಕೆಲಸದ ಅವಧಿಯನ್ನು ಬದಲಾವಣೆ ಮಾಡುವ ಕುರಿತಂತೆ ಶಾಲಾ ಶಿಕ್ಷಣ ಮತ್ತು ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಮೂಲಕ ಖಾಸಗಿ ಹಾಗೂ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳು, ಶಾಲಾ ಬಸ್ ಆಪರೇಟರ್‍ಗಳು, ಪಾಲಕರ ಸಂಘಗಳು ಪ್ರತಿನಿಧಿಗಳ ಜತೆಗೆ ಸಭೆ ಕರೆದು ಸಮಾಲೋಚಿಸಿ ಆರು ವಾರಗಳಲ್ಲಿ ವರದಿ ಸಲ್ಲಿಸುವಂತೆ ಸರಕಾರಕ್ಕೆ ನಿರ್ದೇಶಿಸಿತ್ತು.

ಈಗ ಆ ಅವಧಿಯನ್ನು ಎಂಟು ವಾರಗಳ ಕಾಲ ವಿಸ್ತರಿಸಿ ಆದೇಶಿಸಿದೆ. ಇನ್ನು ಮುಂದೆ ಯಾವ ರೀತಿ ಸಮಯ ಬದಲಾವಣೆ ಆಗಲಿದೆ ಎಂಬ ಬಗ್ಗೆ ಕಾದು ನೋಡಬೇಕಿದೆ.

Related posts

ಉಡುಪಿ: ಕಾರ್ಮಿಕನ ಮೈಮೇಲೆ ಪ್ರೇತಾತ್ಮ ಆವಾಹನೆ..! ಮೀನು ಕಟ್ಟಿಂಗ್ ಮಿಷನ್ ಹಿಡಿದೇ ಸಹ ಕೆಲಸಗಾರರ ಮೇಲೆ ದಾಳಿ..! ಎದ್ನೋ..ಬಿದ್ನೋ ಅಂತ ಓಡಿದ ಸಹ ಕಾರ್ಮಿಕರು..!

ಮಣಿಪಾಲ: ಗಾಂಜಾ ಸೇವಿಸಿದ ಐವರು ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ

ಉಡುಪಿ: ಜಲಪಾತದಲ್ಲಿ ಬಿದ್ದು ಕಣ್ಮರೆಯಾಗಿದ್ದ ಯುವಕನ ಶವ ವಾರದ ಬಳಿಕ ಪತ್ತೆ