ಶಿಕ್ಷಣ

ವಿದ್ಯಾರ್ಥಿಗಳೇ ಗಮನಿಸಿ: ದ್ವಿತೀಯ ಪಿಯುಸಿ ಪರೀಕ್ಷೆ ಕುರಿತು ಮಹತ್ವದ ಆದೇಶ..!

ನ್ಯೂಸ್ ನಾಟೌಟ್ : ಪ್ರಾಯೋಗಿಕ ಪರೀಕ್ಷೆಗೆ ಗೈರು ಹಾಜರಾದ ವಿದ್ಯಾರ್ಥಿಗಳಿಗೆ ಫೆ.20ರಿಂದ ಫೆ.28 ರವರೆಗೆ ಪೂರಕ ಪ್ರಯೋಗಿಕ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ತೀರ್ಮಾನಿಸಿದೆ.

ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ದ್ವಿತಿಯ ಪಿಯುಸಿ ಪರೀಕ್ಷೆಗಳಿಗೆ ಗೈರಾದ ವಿದ್ಯಾರ್ಥಿಗಳಿಗಾಗಿ ಮಹತ್ವದ ಆದೇಶ ಹೊರಡಿಸಿದೆ. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ನೈಜ ಕಾರಣಗಳಿಂದ ಗೈರು ಹಾಜರಾದ ವಿದ್ಯಾರ್ಥಿಗಳಿಗೆ ಫೆ.20 ರಿಂದ ಫೆ.೨೮ ರ ವರೆಗೆ ಪೂರಕ ಪ್ರಯೋಗಿಕ ಪರೀಕ್ಷೆಗಳಿಗೆ ಹಾಜರಾಗಲು ಅವಕಾಶ ನೀಡಲಾಗಿದೆ.

ಈ ಪ್ರಾಯೋಗಿಕ ಪರೀಕ್ಷೆಗೆ ಪ್ರವೇಶ ಪತ್ರವನ್ನು ಪಡೆದು ಅರ್ಹ ವಿದ್ಯಾರ್ಥಿಯು ಸೂಕ್ತ ಅನಿವಾರ್ಯ ಕಾರಣಗಳಿಂದ ಪ್ರಾಯೋಗಿಕ ಪರೀಕ್ಷೆ ಬರೆಯಲು ಸಾಧ್ಯವಾಗದೆ ಗೈರು ಹಾಜರಾಗಿದ್ದಲ್ಲಿ ಮಾತ್ರ ಈ ಆವಕಾಶ ಕಲ್ಪಿಸಲಾಗುವುದು ಎಂದು ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ.

Related posts

ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ..? ಕೊನೆ ದಿನಾಂಕ ಯಾವಾಗ..? ಇಲ್ಲಿದೆ ಸಂಪೂರ್ಣ ಮಾಹಿತಿ

ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಫಲಿತಾಂಶ ಪ್ರಕಟ: ಬೆಳ್ಳಾರೆ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಗೆ ಸತತ 7ನೇ ಬಾರಿ ಶೇ.100 ಫಲಿತಾಂಶ

ನಾಳೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ