ನ್ಯೂಸ್ ನಾಟೌಟ್: ಐಪಿಎಲ್ -2025ನ್ನು ಕಪ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿಯಾಗಿ ವಿಧಾನಸೌಧದ ಮುಂಭಾಗ ಮೆಟ್ಟಿಲುಗಳ ಮೇಲೆ ಕಾರ್ಯಕ್ರಮ ನಡೆಯಲಿದ್ದು, ಸಿಎಂ ಅಭಿನಂದಿಸಲಿದ್ದಾರೆ.
ಸಂಜೆ 6 ಗಂಟೆಗೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭಿಮಾನಿಗಳೊಂದಿಗೆ ಆರ್ ಸಿಬಿ ಆಟಗಾರರ ಸಂಭ್ರಮಾಚರಣೆ ನಡೆಯಲಿದೆ. ಅದಕ್ಕೂ ಮೊದಲು ವಿಧಾನಸೌಧದಿಂದ ಚಿನ್ನಸ್ವಾಮಿ ಕ್ರೀಡಾಂಗಣದವರೆಗೆ ತಂಡದ ಆಟಗಾರರ ವಿಜಯೋತ್ಸವ ಮೆರವಣಿಗೆಯನ್ನು ನಡೆಸುವುದೆಂದು ತೀರ್ಮಾನವಾಗಿತ್ತು. ಆದರೆ ವಿಜಯೋತ್ಸವ ಮೆರವಣಿಗೆ ಕೊನೆಕ್ಷಣದಲ್ಲಿ ರದ್ದಾಗಿದೆ. ತೆರೆದ ವಾಹನದಲ್ಲಿ ಆರ್ ಸಿಬಿ ಆಟಗಾರರ ಮೆರವಣಿಗೆ ಇಲ್ಲ. ಭದ್ರತೆ ದೃಷ್ಟಿಯಿಂದ ತೆರೆದ ವಾಹನದಲ್ಲಿ ಮೆರವಣಿಗೆ ಇಲ್ಲ ಎಂದು ಎಂದು ವಿಧಾನಸೌಧದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಆರ್ ಸಿಬಿ ತಂಡದ ಆಟಗಾರರಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಮೇಲೆ ಅಭಿನಂದನೆ ಸಲ್ಲಿಸಲಾಗುವುದು. ಈ ವೇಳೆ ಆರ್ ಸಿಬಿ ತಂಡದ ಪರವಾಗಿ ಒಬ್ಬರು ಮಾತನಾಡಲಿದ್ದಾರೆ. ನಂತರ ಎಲ್ಲಾ ಆಟಗಾರರು ಬಸ್ ನಲ್ಲೇ ವಿಧಾನಸೌಧದಿಂದ ಸ್ಟೇಡಿಯಂಗೆ ತೆರಳಲಿದ್ದಾರೆ ಎಂದು ತಿಳಿಸಿದರು.
ಸೀಮಿತ ಪಾರ್ಕಿಂಗ್ ಇರುವುದರಿಂದ ಸಾರ್ವಜನಿಕರು ಮೆಟ್ರೊ ಮತ್ತು ಇತರ ಸಾರ್ವಜನಿಕ ಸಾರಿಗೆಯನ್ನು ಬಳಸುವಂತೆ ಸೂಚಿಸಲಾಗಿದೆ.
— ಬೆಂಗಳೂರು ಸಂಚಾರ ಪೊಲೀಸ್ BengaluruTrafficPolice (@blrcitytraffic) June 4, 2025
ಸಂಭ್ರಮಾಚರಣೆ ವೇಳೆ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಹೀಗಾಗಿ ಆಟಗಾರರು ಮತ್ತು ಅಭಿಮಾನಿಗಳಿಗೆ ಯಾವುದೇ ತೊಂದರೆ ಆಗಬಾರದು ಎಂದು ಡಿಜಿ&ಐಜಿಪಿ ಸಲೀಂ ಹಾಗೂ ಸಂಚಾರಿ ಜಂಟಿ ಆಯುಕ್ತ ಎಂ ಎನ್ ಅನುಚೇತ್ ಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ.
ದೇರಳಕಟ್ಟೆ: ಆಸ್ಪತ್ರೆಯೊಂದಕ್ಕೆ ಹುಸಿ ಬಾಂಬ್ ಬೆದರಿಕೆ..! ಆರೋಪಿಗಾಗಿ ಹುಡುಕಾಟ..!