Latestದೇಶ-ವಿದೇಶ

ಪಹಲ್ಗಾಮ್ ದಾಳಿ ಕುರಿತು ಟ್ವಿಟ್ಟರ್ ನಲ್ಲಿ ವಿವಾದಾತ್ಮಕ ಪೋಸ್ಟ್‌ !ಜಾನಪದ ಗಾಯಕಿ ವಿರುದ್ಧ ದೇಶದ್ರೋಹದ ಕೇಸ್ ದಾಖಲು!

664

ನ್ಯೂಸ್‌ ನಾಟೌಟ್: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ವಿರುದ್ಧ ಪೊಲೀಸರು ದೇಶದ್ರೋಹ ಪ್ರಕರಣ ದಾಖಲಿಸಿದ್ದಾರೆ. ಪಹಲ್ಗಾಮ್ ಉಗ್ರ ದಾಳಿಯ ನಂತರ ನಿರ್ದಿಷ್ಟ ಧಾರ್ಮಿಕ ಸಮುದಾಯವನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲಾದ ಪ್ರಚೋದನಕಾರಿ ಪೋಸ್ಟ್‌ಗಳು ದೇಶದ ಏಕತೆಗೆ ಹಾನಿ ಉಂಟುಮಾಡಬಹುದು ಎಂಬ ದೂರಿನ ಆಧಾರದ ಮೇರೆಗೆ ಈ ಕೇಸ್ ದಾಖಲಿಸಲಾಗಿದೆ.

ಕಳೆದ ವಾರ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರನ್ನು ಹತ್ಯೆ ಮಾಡಲಾಗಿತ್ತು. ಪ್ರವಾಸಿಗರ ಧರ್ಮವನ್ನು ಕೇಳಿ ಹತ್ಯೆ ಮಾಡಲಾಗಿದ್ದು, ಇದು ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಗುರಿಯಾಗಿದೆ.”ಇಂತಹ ಪರಿಸ್ಥಿತಿಯಲ್ಲಿ, ಗಾಯಕಿ ಮತ್ತು ಕವಯಿತ್ರಿ ನೇಹಾ ಸಿಂಗ್ ರಾಥೋಡ್ ಅವರು ತಮ್ಮ ಟ್ವಿಟರ್(ಈಗ X) ಹ್ಯಾಂಡಲ್ @nehafolksinger ಬಳಸಿಕೊಂಡು ರಾಷ್ಟ್ರೀಯ ಸಮಗ್ರತೆ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಕೆಲವು ಆಕ್ಷೇಪಾರ್ಹ ಪೋಸ್ಟ್‌ಗಳನ್ನು ಮಾಡಿದ್ದಾರೆ . ಮಾತ್ರವಲ್ಲ ಧರ್ಮದ ಆಧಾರದ ಮೇಲೆ ಒಂದು ಸಮುದಾಯವನ್ನು ಮತ್ತೊಂದು ಸಮುದಾಯವನ್ನು ಪ್ರಚೋದಿಸಲು ಪದೇ ಪದೇ ಯತ್ನಿಸಿದ್ದಾರೆ” ಎಂದು ದೂರುದಾರ ಅಭಯ್ ಪ್ರತಾಪ್ ಸಿಂಗ್ ಆರೋಪಿಸಿದ್ದಾರೆ.ದೂರಿನ ಆಧಾರದ ಮೇಲೆ ಲಖನೌದ ಹಜರತ್‌ಗಂಜ್ ಪೊಲೀಸ್ ಠಾಣೆಯಲ್ಲಿ ಗಾಯಕಿ ವಿರುದ್ಧ ದೂರು ದಾಖಲಿಸಲಾಗಿದೆ.

ದೂರಿನ ಆಧಾರದ ಮೇಲೆ, ಪೊಲೀಸರು ಭಾರತೀಯ ನ್ಯಾಯ ಸಂಹಿತಾ (ಬಿಎನ್ ಎಸ್) ಅಡಿಯಲ್ಲಿ ಜಾನಪದ ಗಾಯಕಿಯ ವಿರುದ್ಧ ಹಲವಾರು ಆರೋಪಗಳ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಇದರಲ್ಲಿ ಮತೀಯ ದ್ವೇಷವನ್ನು ಉತ್ತೇಜಿಸಲು ಪ್ರಯತ್ನಿಸುವುದು, ಸಾರ್ವಜನಿಕ ಶಾಂತಿಗೆ ಭಂಗ ತರುವುದು ಮತ್ತು ಭಾರತದ ಸಾರ್ವಭೌಮತ್ವ, ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟು ಮಾಡುವುದು ಸೇರಿವೆ ಎಂದು ಪೊಲೀಸರು ತಿಳಿಸಿದ್ದಾರೆ.ನೇಹಾ ಅವರ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿಯೂ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

See also  ಭಾರತದ ಪ್ರತೀಕಾರದ ಭಯದಲ್ಲಿ ಪಾಕ್..! ಕಳೆದ ರಾತ್ರಿ ಗಡಿಯುದ್ದಕ್ಕೂ ಫೈಟರ್ ಜೆಟ್‌ ಗಳನ್ನು ಹಾರಿಸಿದ ಪಾಕ್ ವಾಯುಪಡೆ..!
  Ad Widget   Ad Widget   Ad Widget   Ad Widget