ಕರಾವಳಿಪುತ್ತೂರುರಾಜಕೀಯಸುಳ್ಯ

ಜನರ ಆಶೀರ್ವಾದದಿಂದ ನಿಸ್ವಾರ್ಥ ಸೇವೆ

ನ್ಯೂಸ್ ನಾಟೌಟ್ : ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಕಾಂಗ್ರೆಸ್ ಅವಕಾಶ ನೀಡಿರುವುದು ತುಂಬಾ ಸಂತಸ ತಂದಿದೆ. ಈ ಕ್ಷೇತ್ರದಿಂದ 14 ಮಂದಿ ಟಿಕೆಟ್ ಆಕಾಂಕ್ಷಿಗಳಿದ್ದರೂ ಪಕ್ಷ ನನಗೆ ಅವಕಾಶ ನೀಡಿದೆ. ಆದರೆ ಇತರ ಆಕಾಂಕ್ಷಿಗಳೂ ನನ್ನ ಜತೆ ಇದ್ದು, ನಮ್ಮಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯಗಳಿಲ್ಲದೆ ಒಟ್ಟಿಗೆ ಕೆಲಸ ಮಾಡುತ್ತೇವೆ. ಹಿರಿಯರ ಸಲಹೆಯಂತೆ ಕಾರ್ಯಕರ್ತರಿಗೆ, ಕ್ಷೇತ್ರದ ಜನತೆಗೆ ನೋವಾಗದಂತೆ ನಡೆದುಕೊಳ್ಳುತ್ತೇನೆ ಎಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಅಶೋಕ್‌ ರೈ ಹೇಳಿದರು.

ಪುತ್ತೂರಿನಲ್ಲಿ ಸಾವಿರಾರು ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ಸಾಗಿ ನಾಮಪತ್ರ ಸಲ್ಲಿಸಿದ ಬಳಿಕ ಕಿಲ್ಲೆ ಮೈದಾನದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಬಿಜೆಪಿಯಲ್ಲಿ ಇದ್ದುಕೊಂಡೆ ಯಾವುದೇ ಪಕ್ಷ, ಭೇದ ಮಾಡದೆ ಸಾಮಾಜಿಕ, ಮಾನವೀಯ ನೆಲೆಯಲ್ಲಿ 2300 ಮುಸ್ಲಿಂ ಕುಟುಂಬಗಳಿಗೆ ನೆರವಾಗಿದ್ದೇನೆ. ನಾವು ಮಾಡಿದ ಕೆಲಸವನ್ನು ಮನೆ ಮನೆಗೆ ತಿಳಿಯಪಡಿಸುವ ಮೂಲಕ ನಾವು ಬೂತ್ ಮಟ್ಟದ್ದಲ್ಲೂ ಕೆಲಸ ಮಾಡುವ ಅಗತ್ಯವಿದೆ. ಪಕ್ಷದ ಪ್ರಣಾಳಿಕೆಯನ್ನು ಪ್ರತಿ ಮನೆಗೂ ತಲುಪಿಸುವ ಕೆಲಸವಾಗಬೇಕು. ಸರ್ಕಾರದ ಯೋಜನೆಗಳನ್ನು ಜನರಿಗೆ ಮುಟ್ಟಿಸುವ ಪ್ರಾಮಾಣಿಕ ಕೆಲಸ ಮಾಡುತ್ತೇನೆ ನನ್ನನ್ನು ಆಶೀರ್ವದಿಸಿ ಎಂದು ಜನತೆಯಲ್ಲಿ ಮನವಿ ಮಾಡಿದರು.

ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಮಾತನಾಡಿ, ಜನಪ್ರತಿನಿಧಿಗಳು ಕೋಮು ಸೌಹಾರ್ದತೆ ಉಳಿಸುವ ಉದ್ದೇಶದಿಂದ ಜಾತಿ, ಧರ್ಮ ಎನ್ನದೆ ಎಲ್ಲರಿಗೂ ಸಾಮಾಜಿಕ ನ್ಯಾಯ ಒದಗಿಸಿಕೊಡಬೇಕು. ನಾವೆಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿ ಕಾಂಗ್ರೆಸ್‌ ಅಭ್ಯರ್ಥಿ ಅಶೋಕ್‌ ರೈ ಅವರನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸಿಕೊಡಬೇಕು ಎಂದು ಹೇಳಿದರು.

ವೇದಿಕೆಯಲ್ಲಿ ಕೆಪಿಸಿಸಿ ಸಂಯೋಜಕ ಕಾವು ಹೇಮಾನಾಥ ಶೆಟ್ಟಿ, ಕೆಪಿಸಿಸಿ ವಕ್ತಾರೆ ಭವ್ಯ ನರಸಿಂಹ ಮೂರ್ತಿ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಂ.ಬಿ. ವಿಶ್ವನಾಥ ರೈ, ನಗರ ಕಾಂಗ್ರೆಸ್‌ ಅಧ್ಯಕ್ಷ ಮಹಮ್ಮದ್‌ ಆಲಿ, ವಿಟ್ಲ- ಉಪ್ಪಿನಂಗಡಿ ಬ್ಲಾಕ್‌ ಅಧ್ಯಕ್ಷ ಡಾ. ರಾಜಾರಾಮ್‌ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು. ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಂಡಿದ್ದರು.

Related posts

ಮಡಿಕೇರಿ:ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆಗೆ ಶರಣು,ಮನೆಯಲ್ಲಿ ಯಾರೂ ಇಲ್ಲದ ವೇಳೆ ದುರಂತ

‘ಸಿದ್ದರಾಮಯ್ಯರನ್ನು ಮುಗಿಸಲು ಡಿಕೆ ಶಿವಕುಮಾರ್‌ ಪ್ಲಾನ್‌..! ನಂಗೆ ಎಲ್ಲಾ ಗೊತ್ತಿದೆ’ ಎಂದ ಯತ್ನಾಳ್‌

ಬೆಳ್ತಂಗಡಿ: ಇಲಿ ಪಾಷಾಣ ಸೇವಿಸಿದ ವ್ಯಕ್ತಿ ಸಾವು